ಕುಂದಾಪುರ( ಸೆ,29): ಮೂಡ್ಲಕಟ್ಟೆ ಐ ಎಮ್ ಜೆ ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಒಂದು ದಿನದ ಪ್ರಿ ಪ್ಲೇಸ್ಮೆಂಟ್ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು .
ಈ ತರಬೇತಿ ಕಾರ್ಯಗಾರವನ್ನು ಎಕಾಮ್ ಗ್ಲೋಬಲ್ ಪ್ರೈವೇಟ್ ಲಿಮಿಟೆಡ್ (ಯುಎಸ್), ಬೆಂಗಳೂರಿನ ಡೆಪ್ಯುಟಿ ಟೀಮ್ ಲೀಡ್ ರಾದ ಶ್ರೀ ದೇವರಾಜ ರವರು ನಡೆಸಿಕೊಟ್ಟರು. ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ಎದುರಿಸುವ ಬಗೆ, ವಿವಿಧ ಹಂತ, ಮತ್ತು ಪೂರ್ವ ತಯಾರಿಯ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ಹಂಚಿಕೊಂಡರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಉಪ ಪ್ರಾಂಶುಪಾಲರು ಮತ್ತು ಪ್ಲೇಸ್ಮೆಂಟ್ ವಿಭಾಗದ ಮುಖ್ಯಸ್ಥರಾದ ಶ್ರೀ ಜಯಶೀಲ್ ಕುಮಾರ್ ಉಪಸ್ಥಿತರಿದ್ದರು. ಇಂಗ್ಲಿಷ್ ಉಪನ್ಯಾಸಕಿ ಮತ್ತು ಸಹಾಯಕ ಪ್ಲೇಸ್ಮೆಂಟ್ ಅಧಿಕಾರಿ ರಾಜೇಶ್ವರಿ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.