ಹೆಮ್ಮಾಡಿ ( ಆ ,03): ಪದವಿಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಜಿಲ್ಲಾ ಮಟ್ಟದ ಬಾಪೂಜಿ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿ.ಯು.ಸಿ.ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ರಕ್ಷಿತಾ ಭಟ್ ಪ್ರಥಮ ಸ್ಥಾನ ಪಡೆದು,ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾಳೆ.
ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.