ಕುಂದಾಪುರ (ಅ 02) : ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ ಮತ್ತು ವಿ.ಕೆ.ಆರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಕ್ಟೋಬರ್ ,02 ರಂದು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜಯಂತಿಯನ್ನು ಆಚರಿಸಲಾಯಿತು.
ಗಾಂಧೀಜಿ ಮತ್ತು ಶಾಸ್ತ್ರೀಜಿಯವರ ಭಾವಚಿತ್ರಗಳಿಗೆ ಸಂಸ್ಥೆಯ ಪ್ರಾಂಶುಪಾಲರು ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ದೀಪ ಬೆಳಗಿಸಿ ಪುಷ್ಪಾರ್ಚನೆ ಗೈದರು. ಪ್ರಾಂಶುಪಾಲೆ ಡಾ. ಚಿಂತನಾ ರಾಜೇಶ್ ಗಾಂಧೀಜಿ ಮತ್ತು ಶಾಸ್ತ್ರೀಜಿಯವರು ನಡೆದು ಬಂದ ಹಾದಿ, ಅವರ ಜೀವನ ಇವುಗಳನ್ನು ಗಾಂಧಿ ಜಯಂತಿಯ ದಿನಾಚರಣೆಗೆ ಮಾತ್ರ ಸೀಮಿತವಾಗಿರಿಸದೆ ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು. ಶಿಕ್ಷಕಿ ಸ್ವಾತಿ “ಗಾಂಧೀಜಿ ಮತ್ತು ಶಿಕ್ಷಣ” ಎಂಬ ವಿಷಯದ ಕುರಿತು ಮಾತನಾಡಿದರು.
ಸಂಸ್ಥೆಯ ಸ್ಕೌಟ್ಸ್, ಗೈಡ್ಸ್, ಎನ್. ಸಿ. ಸಿ ವಿದ್ಯಾರ್ಥಿಗಳು ಮತ್ತು ಸಂಸ್ಥೆಯ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಸರ್ವಧರ್ಮ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ತದನಂತರ ಶಾಲಾವರಣದ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಯಿತು. ಶಿಕ್ಷಕ ಪ್ರಕಾಶ್.ಎಸ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.