ಕುಂದಾಪುರ ( ಆ .09): ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ ಮತ್ತು ಭಾರತೀಯ ರೆಡ್ ಕ್ರಾಸ್ ಸೊಸೈಟಿ ಕುಂದಾಪುರದ ಸಹಯೋಗದೊಂದಿಗೆ ಡೆಂಗ್ಯೂ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಕುಂದಾಪುರ ತಾಲೂಕು ಆರೋಗ್ಯಾಧಿಕಾರಿಗಳಾದ ಡಾ.ಪ್ರೇಮಾನಂದರವರು “ಡೆಂಗ್ಯೂ ಎಂಬುದು ಸೊಳ್ಳೆಗಳ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವ ಕಾಯಿಲೆಯಾಗಿದೆ. ಡೆಂಗ್ಯೂ ಜ್ವರದ ರೋಗದ ಲಕ್ಷಣಗಳನ್ನು ತಿಳಿಸುತ್ತಾ, ಅದನ್ನು ತಡೆಗಟ್ಟಲು ಕೈಗೊಳ್ಳಬೇಕಾದ ಕ್ರಮವನ್ನು ಸಮಗ್ರವಾಗಿ ವಿವರಿಸಿದರು. ಅಲ್ಲದೆ ಡೆಂಗ್ಯೂ ಜ್ವರ ಹರಡದಂತೆ ಸುತ್ತಮತ್ತಲ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಲು ಎಲ್ಲರೂ ಪಣತೊಡಬೇಕು” ಎಂದು ತಿಳಿಸಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಕುಂದಾಪುರದ ಅಧ್ಯಕ್ಷರಾದ ಶ್ರೀ ಜಯಕರ ಶೆಟ್ಟಿ ಅವರು ಮಾತನಾಡಿ “ಎಲ್ಲರೂ ಡೆಂಗ್ಯೂ ಕಾಯಿಲೆಯ ಬಗ್ಗೆ ಜಾಗೃತಿಯನ್ನು ಮೂಡಿಸಿಕೊಳ್ಳಬೇಕು, ಪೆಟ್ಲಟ್ ಅನ್ನು ದೇಹದಲ್ಲಿ ಹೆಚ್ಚಿಸಿಕೊಳ್ಳಬೇಕು. ಆರೋಗ್ಯಕರವಾದ ಜೀವನವನ್ನು ಸದಾ ಕಾಪಾಡಿಕೊಳ್ಳಬೇಕು” ಎಂದರು. ಕಾರ್ಯಕ್ರಮದಲ್ಲಿ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ಸಂಯೋಜಕರಾದ ಶ್ರೀ. ಸತ್ಯನಾರಾಯಣ ಪುರಾಣಿಕ್, ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಶಬೀನಾ.ಹೆಚ್, ಕಾಲೇಜಿನ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಅಹಮದ್ ಖಲೀಲ್, ಜಾಸ್ಮಿನ್ ಫೆರ್ನಾಂಡಿಸ್, ವಿದ್ಯಾರ್ಥಿ ಪ್ರತಿನಿಧಿ ದ್ವಿತೀಯ ಬಿ.ಕಾಂ ಕಿಫಾಯತುಲ್ಲಾ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಪಂಚಮಿ ಸ್ವಾಗತಿಸಿದರು, ತೃತೀಯ ಬಿ.ಸಿ.ಎ.ವಿದ್ಯಾರ್ಥಿನಿ ಅಫ್ರಾ ವಂದಿಸಿದರು.
ಪ್ರಥಮ ಬಿ.ಕಾಂ ವಿಭಾಗದ ಆಯಿಷಾ ಸನೀನ್ ಕಾರ್ಯಕ್ರಮ ನಿರೂಪಿಸಿದರು.