ಕುಂದಾಪುರ (ಅ 31): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಂಘದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆಯ ಹಿನ್ನಲೆಯಲ್ಲಿ ಕಲಾಕ್ಷೇತ್ರ ಕುಂದಾಪುರ ಸಹಯೋಗದೊಂದಿಗೆ ಕನ್ನಡ ರಾಜ್ಯೋತ್ಸವ ಅಂಗವಾಗಿ ‘ಕನ್ನಡ ಹಬ್ಬ’ ಸಪ್ತಾಹದ ಪೂರ್ವಭಾವಿಯಾಗಿ ಅಕ್ಟೋಬರ್ 31ರಂದು ಕುಂದಾಪುರ ನಗರದಲ್ಲಿ ‘ಕನ್ನಡ ರಥೋತ್ಸವ’ ಪುರ ಮೆರವಣಿಗೆಯಲ್ಲಿ ಕಾಲೇಜಿನ ಕನ್ನಡ ಸಂಘದ ವಿದ್ಯಾರ್ಥಿಗಳು ಹಾಗೂ ಬೋಧಕೇತರರು ಭಾಗವಹಿಸಿದರು.

ಕುಂದಾಪುರದ ಜ್ಯೂನಿಯರ್ ಕಾಲೇಜಿನಿಂದ ಪ್ರಾರಂಭವಾದ ಪುರಮೆರವಣಿಗೆ ಕುಂದಾಪುರ ನಗರದ ಒಳಗಡೆ ಜಾಥಾ ನಡೆಸಿ, ಕೊನೆಗೆ ಜ್ಯೂನಿಯರ್ ಕಾಲೇಜಿನಲ್ಲಿ ಸಂಪನ್ನಗೊoಡಿತು.
ಈ ಸಂದರ್ಭದಲ್ಲಿ ಕಾಲೇಜಿನ ಕನ್ನಡ ಸಂಘದ ಸಂಯೋಜಕರಾದ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಸುಕುಮಾರ್ ಶೆಟ್ಟಿ ಕಮಲಶಿಲೆ, ಸಹ ಸಂಯೋಜಕರಾದ ವಾಣಿಜ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ವೇತಾ ಭಂಡಾರಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ರಕ್ಷಿತ್ ರಾವ್ ಗುಜ್ಜಾಡಿ ಹಾಗೂ ಕನ್ನಡ ಸಂಘದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.











