ಕಾರ್ಕಳ ( ನ .26): ಪುರಾತತ್ವ ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ ಮೈಸೂರು ಉಪ ನಿರ್ದೇಶಕರ ಕಛೇರಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಉಡುಪಿ ಸಹಯೋಗದೊಂದಿಗೆ ನಡೆದ 2024-25 ನೇ ಸಾಲಿನ ಜಿಲ್ಲಾ ಮಟ್ಟದ ಪ್ರಾಚ್ಯ ಪ್ರಜ್ಞೆ ಚಿತ್ರಕಲಾ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಆಂಗ್ಲಮಾಧ್ಯಮ ಪ್ರೌಢಶಾಲೆಯ 10ನೇ ತರಗತಿಯ ವಿದ್ಯಾರ್ಥಿಯಾದ ಆದಿತ್ಯ ಎನ್. ನಾಯಕ್ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಇವರು ಕಾರ್ಕಳದ ಶ್ರೀ ನಿತ್ಯಾನಂದ ನಾಯಕ್ ಹಾಗೂ ಶ್ರೀಮತಿ ಸಂಗೀತ ಹೆಚ್ ದಂಪತಿಯ ಸುಪುತ್ರನಾಗಿರುತ್ತಾರೆ. ಇವರನ್ನು ಸಂಸ್ಥೆಯ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.