ಕೋಡಿ(ಡಿ.24): ಇಲ್ಲಿನ ಬ್ಯಾರೀಸ್ ಪಿಯು ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರೇರಣೆ, ಜ್ಞಾಪಕಶಕ್ತಿ ಮತ್ತು ಅಧ್ಯಯನ ಕೌಶಲ್ಯಗಳ ಕುರಿತು ಕಾರ್ಯಾಗಾರ ಡಿಸೆಂಬರ್ 23 ರಂದು ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿಗಳಾಗಿ ಸಿಗ್ಮಾ, ಬೆಂಗಳೂರು ಇದರ ಸಿ.ಇ.ಒ ಮತ್ತು ಸಂಸ್ಥಾಪಕರಾದ ಶ್ರೀ. ಅಮೀನ್ .ಇ ಮುದಸ್ಸರ್, ಆಗಮಿಸಿದ್ದರು. ದ್ವಿತೀಯ ಪಿಯುಸಿ ತರಗತಿಗಳಿಗೆ ಬಹುವಿಧದ ಜ್ಞಾಪಕಶಕ್ತಿಯ ತಂತ್ರಗಳನ್ನು ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ಅಭಿವೃದ್ಧಿಗೆ ಪೂರಕವಾದ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಡೆಸಿದರು. ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಗಳು ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಪುನಶ್ಚೇತನ ಶಿಬಿರವನ್ನು ನಡೆಸಿದರು.
ಬ್ಯಾರೀಸ್ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಹಾಜಿ ಕೆ.ಎಂ ಅಬ್ದುಲ್ ರೆಹಮಾನ್ ಬ್ಯಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿಕೊಂಡಿದ್ದರು. ಟ್ರಸ್ಟಿಗಳಾದ ಡಾ. ಆಸಿಫ್ ಬ್ಯಾರಿ ಪ್ರಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದ ವೇದಿಕೆಯಲ್ಲಿ ಬ್ಯಾರೀಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ. ಅಶ್ವಿನಿ ಶೆಟ್ಟಿ, ಉಪಪ್ರಾಂಶುಪಾಲೆ ಶ್ರೀಮತಿ ಝಿಯಾನ, ವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ. ಪೂರ್ಣಿಮಾ .ಟಿ, ಬ್ಯಾರೀಸ್ ಪದವಿ ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ. ಶಬೀನಾ ಹೆಚ್ ಉಪಸ್ಥಿತರಿದ್ದರು.
ಮನಃಶಾಸ್ತ್ರ ಉಪನ್ಯಾಸಕಿ ಲಾಮಿಸ್ ಲರೈಬ್ ಸಂಪನ್ಮೂಲ ವ್ಯಕ್ತಿಗಳನ್ನು ಸಭೆಗೆ ಪರಿಚರಿಸಿದರು, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಝುನಿಯಾ ಕೌಸರ್ ವಂದಿಸಿ, ಆಯಿಷಾ ಬಹಿರಾ ಕಾರ್ಯಕ್ರಮ ನಿರೂಪಿಸಿದರು.