
ಕುಂದಾಪುರ (ದಿ.30): ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ವಿಭಾಗದ 6ನೇ ತರಗತಿಯ ವಿಧ್ಯಾರ್ಥಿ ಅಥರ್ವ ಖಾರ್ವಿ ನವದೆಹಲಿಯಲ್ಲಿ ಜರುಗಿದ ಆಲ್ ಇಂಡಿಯಾ ಸಬ್ ಜೂನಿಯರ್ ರಾಷ್ಟ್ರಮಟ್ಟದ ಕರಾಟೆ ಚಾಂಪಿಯನ್ಶಿಪ್ನಲ್ಲಿ ಭಾಗವಹಿಸಿ, ಕಂಚಿನ ಪದಕವನ್ನು ಗಳಿಸಿರುತ್ತಾನೆ. ಕಂಚಿನ ಪದಕ ವಿಜೇತ ಕರಾಟೆ ಪಟುವನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು.










