ನವ ದೆಹಲಿ : ಕಾಂಗ್ರೆಸ್ ಹಿರಿಯ ನಾಯಕ ಹಾಗೂ ರಾಜ್ಯ ಸಭೆಯ ವಿರೋಧ ಪಕ್ಷದ ನಾಯಕರಾಗಿದ್ದ ಗುಲಾಮ್ ನಭಿ ಆಜಾದ್ ನಿವೃತ್ತರಾಗಿದ್ದಾರೆ. ನಿವೃತ್ತಿಯ ಹಿನ್ನೆಲೆ ವಿದಾಯ ಭಾಷಣ ಮಾಡಿದ ಅವರು, ಪಾಕಿಸ್ತಾನಕ್ಕೆ ಹೋಗದ ಅದೃಷ್ಟವಂತ ಜನರಲ್ಲಿ ನಾನೂ ಸಹ ಒಬ್ಬನಾಗಿದ್ದಾನೆ. ಭಾರತದ ಪ್ರಜೆಯಾಗಿದ್ದಕ್ಕೆ ಹೆಮ್ಮೆ ಪಡುತ್ತೇನೆ ಎಂದು ಭಾವುಕರಾಗಿ ಮನದ ಮಾತುಗಳನ್ನು ವ್ಯಕ್ತ ಪಡಿಸಿದರು.

ದೇಶದಲ್ಲಿ ನಡೆದ ಉಗ್ರರ ದಾಳಿ ಬಗ್ಗೆ ನೆನಪಿಸಿಕೊಂಡ ಅವರು, ದೇಶದಲ್ಲಿ ಭಯೋತ್ಪಾದನೆ ಕೊನೆಗೊಳ್ಳಬೇಕೆಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು. ತಮ್ಮ ರಾಜಕೀಯ ಜೀವನದ ಆರಂಭದ ದಿನಗಳ ಕುರಿತು ಅನುಭವವನ್ನು ಸಭೆಯಲ್ಲಿ ಹಂಚಿಕೊಂಡರು. ರಾಜಕೀಯ ಪ್ರವೇಶ ಮಾಡಲು ಅವಕಾಶ ನೀಡಿದ ಇಂದಿರಾ ಗಾಂಧಿ ಮತ್ತು ಸಂಜಯ್ ಗಾಂಧಿ ಅವರಿಗೆ ಆಭಾರಿಯಾಗಿದ್ದೇನೆ.
ಅಟಲ್ ಬಿಹಾರಿ ವಾಜಪೇಯಿ ಅವರಿಂದ ಸಾಕಷ್ಟು ಕಲಿತಿದ್ದೇನೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡುತ್ತಾ ಗುಲಾಂ ನಭಿ ಆಜಾದ್ ರವರ ಕುರಿತು ಮೆಚ್ಚುಗೆಯ ಮಾತನಾಡುತ್ತಾ ಭಾವುಕರಾಗಿ ಕಣ್ಣಿರಿಟ್ಟರು.










