ಗಂಗೊಳ್ಳಿ (ಆ ,21): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಇತ್ತೀಚೆಗೆ ಕುಂದಾಪುರ ಮತ್ತು ಬೈಂದೂರು ತಾಲೂಕು ಮಟ್ಟದ ದಸರಾ ಕ್ರೀಡಾಕೂಟದ ಅಂಗವಾಗಿ ನಡೆದ ಮಹಿಳೆಯರ ತ್ರೋಬಾಲ್ ನಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ಪ್ರಾಕ್ತನ ಮತ್ತು ಪ್ರಸ್ತುತ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನವನ್ನು ಗಳಿಸಿದೆ.

ವಿಜೇತರಿಗೆ ಸಂಸ್ಥೆ ಅಭಿನಂದನೆ ಕೋರಿದೆ.











