ಕುಂದಾಪುರ( ಆ,24): ಕರ್ನಾಟಕ ಯೋಗಾಸನ ಕ್ರೀಡಾ ಸಂಸ್ಥೆ (ನೊಂ.)ಬೆಂಗಳೂರು ಮತ್ತು ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ಇವರ ಸಹಯೋಗದೊಂದಿಗೆ ರಾಜ್ಯ ಮಟ್ಟದ ಯೋಗಾಸನಾ ಸ್ಪರ್ಧೆ ಶ್ರೀ ಅನುಭವ ಮಂಟಪ ಮುರುಘ ರಾಜೇಂದ್ರ ಬೃಹನ್ಮಠ, ಚಿತ್ರದುರ್ಗ ದಲ್ಲಿ ನಡೆದ ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಗ್ರಾಮ ಪಂಚಾಯತ್ ತ್ರಾಸಿ ಸಿಬ್ಬಂದಿ ಸಂದೀಪ್ ಪೂಜಾರಿಯವರು ವಿವಿಧ ಹಂತದ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ರಾಜ್ಯ ಮಟ್ಟದಿಂದ ರಾಷ್ಟ್ರ ಮಟ್ಟಕ್ಕೆ ಆಯ್ಕೆ ಯಾಗಿರುತ್ತಾರೆ.

ಈಗಾಗಲೇ ಯೋಗಾಸನದಲ್ಲಿ ಅನೇಕ ಸಾಧನೆಯನ್ನು ಮಾಡಿರುವ ಇವರು ಹಲವಾರು ಪ್ರಶಸ್ತಿಯನ್ನು ಪ್ರಶಸ್ತಿಯನ್ನು ಪಡೆದಿದ್ದಾರೆ. ಇವರು ಕುಂದಾಪುರದ ಡಾ. ಬಿಬಿ ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿಯಾಗಿದ್ದಾರೆ.










