ಕುಂದಾಪುರ(ಆ. 25) : ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್. ಎಮ್. ಎಮ್ ಮತ್ತು ವಿ.ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಾದ ವೇದಿಕಾ, ಶ್ರೀಯಾ ಮತ್ತು ವಿಷ್ಮಾ ಕುಂದಾಪುರ ವಲಯ ಮಟ್ಟದ 14ರ ವಯೋಮಾನದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ. ಹಾಗೆಯೇ ಬಾಲಕರ ವಿಭಾಗದಲ್ಲಿ ವಿದ್ಯಾರ್ಥಿಗಳಾದ ಆಶಿಶ್, ಪ್ರಣವ್, ನಿಖಿಲ್, ತನಿಷ್ ಮತ್ತು ಶಯಾನ್ ದ್ವಿತೀಯ ಸ್ಥಾನವನ್ನು ಪಡೆಯುವುದರ ಜೊತೆಗೆ ಆಶಿಶ್ ಮತ್ತು ನಿಖಿಲ್ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಿಜೇತ ವಿದ್ಯಾರ್ಥಿಗಳನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ಶಿಕ್ಷಕರು ಅಭಿನಂದಿಸಿದರು.











