ಕುಂದಾಪುರ (ಸೆ. 2 ): ಸೌತ್ ಇಂಡಿಯಾ ಕರಾಟೆ ಫೆಡರೇಶನ್ ಬೆಂಗಳೂರು ಇವರು ಆಯೋಜಿಸಿದ 4th ಸೌತ್ ಇಂಡಿಯಾ ಕರಾಟೆ ಚಾಂಪಿಯನ್ಶಿಪ್ ನಲ್ಲಿ ಕುಂದಾಪುರ ಎಜುಕೇಶನ್ ಸೊಸೈಟಿ (ರಿ.) ಪ್ರವರ್ತಿತ ಎಚ್.ಎಮ್. ಎಮ್ ಮತ್ತು ವಿ. ಕೆ.ಆರ್ ಶಾಲೆಗಳ ಪ್ರಾಥಮಿಕ ವಿಭಾಗದ 5ನೇ ತರಗತಿಯ ವಿದ್ಯಾರ್ಥಿ ಆರ್ಯನ್ ಕೆ ಪೂಜಾರಿ 10ರ ವಯೋಮಾನದ ಬಾಲಕರ ವಿಭಾಗದ ಕುಮಿಟೆ ಮತ್ತು ಕಟಾ ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾನೆ.

ವಿಜೇತ ವಿದ್ಯಾರ್ಥಿಯನ್ನು ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ವಿವಿಧ ವಿಭಾಗಗಳ ಮುಖ್ಯಸ್ಥರು ಮತ್ತು ಶಿಕ್ಷಕರು ಅಭಿನಂದಿಸಿದರು.

ಇತನಿಗೆ ಕುಂದಾಪುರದ ಕೆ ಡಿ ಎಫ್ ಕರಾಟೆ ಶಾಲೆಯ ಕಿಯೋಷಿ ಕಿರಣ್ ಕುಂದಾಪುರ, ಶಿಹಾನ್ ಸಂದೀಪ್ ವಿ. ಕೆ, ಸೆನ್ ಸಾಯಿ ಶಿಹಾನ್ ಶೇಖ್ ಬಸ್ರುರ್ ಇವರು ತರಬೇತಿ ನೀಡಿದ್ದರು.










