ಕುಂದಾಪುರ (ಸೆ. 12):ಇಲ್ಲಿನ ಡಾ. ಬಿ ಬಿ. ಹೆಗ್ಡೆ ಕಾಲೇಜು, ಕುಂದಾಪುರ ಇದರ ರೋವರ್ಸ್ & ರೇಂಜರ್ಸ್ ಘಟಕದ 2025-26 ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಕಾರ್ಯಕ್ರಮ ಸೆಪ್ಟೆಂಬರ್, 12 ರಂದು ಕಾಲೇಜಿನ ಎ. ವಿ. ಹಾಲ್ ನಲ್ಲಿ ಹಮ್ಮಿಕೊಳ್ಳಲಾಯಿತು.

ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಡಾ. ಕೆ. ಉಮೇಶ್ ಶೆಟ್ಟಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ನಿವೃತ್ತ ವಾಣಿಜ್ಯ ತೆರಿಗೆ ಪರಿವೀಕ್ಷಕರು ಹಾಗೂ ಜಿಲ್ಲಾ ಜನ ಜಾಗೃತಿ ವೇದಿಕೆ, ಉಡುಪಿ ಇದರ ಸದಸ್ಯರಾದ ಶ್ರೀ ಸುಬ್ರಮಣ್ಯ ಶೆಟ್ಟಿಯವರು ಉದ್ಘಾಟಕರಾಗಿ ಆಗಮಿಸಿ ಸ್ವಯಂ ಸೇವಕ ಜವಾಬ್ದಾರಿ ಹಾಗೂ ಸೇವೆಯ ಮಹತ್ವ ದ ಕುರಿತು ತಿಳಿಸಿದರು.

ಕಾಲೇಜಿನ ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ ಪ್ರಸ್ತಾವಿಕ ಮಾತುಗಳನ್ನಾಡಿದರು. ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆ ಕುಂದಾಪುರ ತಾಲೂಕು ಬಿಸಿ ಟ್ರಸ್ಟ್ ಇದರ ಕಾರ್ಯಕ್ರಮ ಅಧಿಕಾರಿಗಳಾದ ಶ್ರೀ ಉಮೇಶ್ ಶೆಟ್ಟಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕಾಲೇಜಿನ ರೋವರ್ ಸ್ಕೌಟ್ ಲೀಡರ್ ಶ್ರೀ ಪ್ರವೀಣ್ ಮೊಗವೀರ ಗಂಗೊಳ್ಳಿ ಸ್ವಾಗತಿಸಿದರು. ರೇಂಜರ್ ಲೀಡರ್ ಜೋಸ್ಲಿನ್ ರೇನಿಟಾ ಅಲ್ಮೆಡಾ ವಂದಿಸಿ ಕಾರ್ಯಕ್ರಮ ನಿರೂಪಿಸಿದರು.











