ಕುಂದಾಪುರ( ಸೆ,15): ಸರ್ ಎಂ ವಿಶ್ವೇಶ್ವರಯ್ಯನವರ ಜನ್ಮದಿನಾಚರಣೆ ಪ್ರಯುಕ್ತ ದೇಶದಾದ್ಯಂತ ಆಚರಿಸುತ್ತಿರುವ ಇಂಜಿನಿಯರ್ಸ್ ಡೇ ಕಾರ್ಯಕ್ರಮವನ್ನು ಕುಂದಾಪುರ ತಾಲೂಕು ಯುವ ಬಂಟರ ಸಂಘದ ವತಿಯಿಂದ ಸೆಪ್ಟೆಂಬರ್ 15 ರಂದು ಆರ್ ಎನ್ ಶೆಟ್ಟಿ ಸಭಾಂಗಣದಲ್ಲಿ ಕುಂದಾಪುರದ ಪುರಸಭಾ ಇಂಜಿನಿಯರ್ (ಪರಿಸರ) ಶ್ರೀ ಗುರುಪ್ರಸಾದ್ ಶೆಟ್ಟಿ ಶಿರೂರು ಅವರನ್ನು ಯುವ ಬಂಟರ ಸಂಘದ ಪೋಷಕ ಸದಸ್ಯರು ,ಹೈದರಾಬಾದ್ ನ ಹಿರಿಯ ಉದ್ಯಮಿ ನೆಲಗೊಂಡ ಸುಧಾಕರ ಶೆಟ್ಟಿ ಜನ್ಸಾಲೆ ಫಲ ಪುಷ್ಪ ನೀಡಿ ಸನ್ಮಾನಿಸಿ ಗೌರವಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಂದಾಪುರ ಯುವ ಬಂಟರ ಸಂಘದ ಅಧ್ಯಕ್ಷರಾದ ಶ್ರೀ ನಿತೀಶ್ ಶೆಟ್ಟಿ ಬಸ್ರೂರು ವಹಿಸಿದ್ದರು.
ಯುವ ಬಂಟರ ಸಂಘದ ದತ್ತಿನಿಧಿ ಪೋಷಕರಾದ ಶ್ರೀ ಕಂದಾವರ ಸತೀಶ್ ಶೆಟ್ಟಿ, ಶ್ರೀ ಅಶೋಕ್ ಶೆಟ್ಟಿ ಸಂಸಾಡಿ, ಶ್ರೀ ಬಿ. ಜಯರಾಮ ಶೆಟ್ಟಿ ಹಳ್ನಾಡು, ಬೈಂದೂರು ಬಂಟರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಶಶಿಧರ ಶೆಟ್ಟಿ ಸಾಲ್ಗದ್ದೆ ಮುಖ್ಯ ಅತಿಥಿಗಳಾಗಿ ಆಗಮಿಸಿದರು.

ಯುವ ಬಂಟರ ಸಂಘದ ಸ್ಥಾಪಕಾಧ್ಯಕ್ಷ ಡಾ.ಅಂಪಾರು ನಿತ್ಯಾನಂದ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಶ್ರೀ ಮುರಳಿಧರ ಶೆಟ್ಟಿ ಹುಯ್ಯಾರು, ಕೋಶಾಧಿಕಾರಿ ಶ್ರೀ ಭರತ್ ರಾಜ್ ಶೆಟ್ಟಿ ಜಾಂಬೂರು, ಮಾಜಿ ಅಧ್ಯಕ್ಷರಾದ ಸುನಿಲ್ ಕುಮಾರ್ ಶೆಟ್ಟಿ ಹೇರಿಕುದ್ರು, ಉದಯಕುಮಾರ್ ಶೆಟ್ಟಿ ಮಚ್ಚಟ್ಟು, ಪ್ರಶಾಂತ ಶೆಟ್ಟಿ ಶಿರೂರು, ಪ್ರದೀಪ್ ಶೆಟ್ಟಿ ಕಾರಿಕಟ್ಟೆ, ಸುರೇಶ ಶೆಟ್ಟಿ ಕಾರಿಜೆಡ್ಡು, ರಾಜೀವ ಶೆಟ್ಟಿ ಹೆಂಗವಳ್ಳಿ,ಸತೀಶ್ ಶೆಟ್ಟಿ ಹೆಸ್ಕತ್ತೂರು, ಅರುಣ್ ಕುಮಾರ್ ಶೆಟ್ಟಿ ಕುಂದಾಪುರ, ಸುಕುಮಾರ ಶೆಟ್ಟಿ ಹೇರಿಕುದ್ರು, ರೋಶನ್ ಶೆಟ್ಟಿ ಕಾಕ್ತೋಟ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀ ಕೊಲ್ಲೂರು ಮೂಕಾಂಬಿಕ ದೇವಳದ ಪ್ರೌಢ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಸಚಿನ್ ಶೆಟ್ಟಿ ಹುಂಚನಿ ಕಾರ್ಯಕ್ರಮ ನಿರೂಪಿಸಿ, ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ವಂದಿಸಿದರು.












