ಕುಂದಾಪುರ (ಸೆ.20): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ, ತ್ರಾಸಿ ಗ್ರಾಮ ಪಂಚಾಯತ್, ಕರಾವಳಿ ಕಾವಲು ಪಡೆ ಪೊಲೀಸ್ ಠಾಣೆ ಗಂಗೊಳ್ಳಿ ಹಾಗೂ ಸಿಬ್ಬಂದಿ ವರ್ಗ, ಸ್ವಚ್ಛ ಕರಾವಳಿ ಮಿಷನ್ ಸದಸ್ಯರು, ಎಸ್.ವಿ. ಪದವಿ ಪೂರ್ವ ಕಾಲೇಜು, ಗಂಗೊಳ್ಳಿ ಎನ್.ಎಸ್.ಎಸ್. ಸ್ವಯಂಸೇವಕರು ಮತ್ತು ಖಾರ್ವಿ ಆನ್ಲೈನ್ ಕುಂದಾಪುರ ಇವುಗಳ ಸಂಯುಕ್ತ ಆಶ್ರಯದಲ್ಲಿ ಅಂತರಾಷ್ಟ್ರೀಯ ಸ್ವಚ್ಛತಾ ದಿನಾಚರಣೆಯ ಹಾಗೂ ಸ್ವಚ್ಛತಾ ಹೀ ಸೇವಾ ಕಾರ್ಯಕ್ರಮದ ಭಾಗವಾಗಿ ತ್ರಾಸಿ ಬೀಚ್ನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ ನಡೆಯಿತು.

ತ್ರಾಸಿ ಗ್ರಾಮ ಪಂಚಾಯತ್ ಅಧ್ಯಕ್ಷ ಮಿಥುನ್ ಎಂ.ಡಿ. ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭ ತ್ರಾಸಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಶೋಭಾ ಎಸ್. ಹಾಗೂ ಸಿಬ್ಬಂದಿ ವರ್ಗ, ಎನ್.ಎಸ್. ಎಸ್. ಯೋಜನಾಧಿಕಾರಿ ರಾಜೇಶ್ ವಕ್ವಾಡಿ ಮತ್ತು ಪೂಜಾ ಕುಂದರ್ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.











