ಕುಂದಾಪುರ (ಅ. 01): ಸೇವಾ ಸಿಂಚನ ಪ್ರತಿಷ್ಠಾನವು ತನ್ನ ಮೂರನೇ ವರ್ಷದ ಯಶಸ್ವಿ ಸಂಸ್ಥಾಪನಾ ದಿನದ ಸವಿನೆನಪಿನಲ್ಲಿ 2025ರ ಶೈಕ್ಷಣಿಕ ದತ್ತಿನಿಧಿಯನ್ನು ಘೋಷಿಸಿದೆ. ಕುಂದಾಪುರ ತಾಲ್ಲೂಕು ವ್ಯಾಪ್ತಿಯ ಪದವಿ ಪೂರ್ವ, ಪದವಿ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ 30 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹವನ್ನು ನೀಡಿ ಅವರ ಶೈಕ್ಷಣಿಕ ಪ್ರಗತಿಗೆ ಸಹಕಾರಿಯಾಗುವುದು ಈ ದತ್ತಿನಿಧಿಯ ಮುಖ್ಯ ಉದ್ದೇಶವಾಗಿದೆ. ಈ ದತ್ತಿನಿಧಿಯು ಆರ್ಥಿಕವಾಗಿ ಹಿಂದುಳಿದ ಮತ್ತು ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಮ್ಮ ಶೈಕ್ಷಣಿಕ ಕನಸುಗಳನ್ನು ಸಾಕಾರಗೊಳಿಸಲು ಒಂದು ಅಮೂಲ್ಯ ಅವಕಾಶವನ್ನು ಒದಗಿಸುತ್ತದೆ. ಆಸಕ್ತ ವಿದ್ಯಾರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಲು ಪ್ರತಿಷ್ಠಾನವು ಪ್ರೋತ್ಸಾಹಿಸುತ್ತದೆ.

ಆಸಕ್ತ ಮತ್ತು ಅರ್ಹ ವಿದ್ಯಾರ್ಥಿಗಳು ತಮ್ಮ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಆನ್ಲೈನ್ನಲ್ಲಿ https://forms.gle/JeWv2nHBM4wXjJXY8 ಲಿಂಕ್ ಮೂಲಕ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ 22 ಅಕ್ಟೋಬರ್ 2025 ಆಗಿದೆ.
ವಿಶೇಷ ಸೂಚನೆಗಳು:
- ಸಲ್ಲಿಸುವ ಎಲ್ಲಾ ದಾಖಲೆಗಳು ಮಾನ್ಯವಾಗಿರಬೇಕು.
- ಅರ್ಜಿದಾರರು ಪದವಿ ಪೂರ್ವ, ಪದವಿ ಅಥವಾ ಸ್ನಾತಕೋತ್ತರ ಪದವಿಯಲ್ಲಿ ಸಾಮಾನ್ಯ ವಿದ್ಯಾರ್ಥಿಯಾಗಿ ಪ್ರವೇಶ ಪಡೆದಿರಬೇಕು.
- ಅರ್ಜಿ ಸಲ್ಲಿಕೆ ವೇಳೆ ಯಾವುದೇ ಗೊಂದಲವಾದಲ್ಲಿ ಪ್ರತಿಷ್ಠಾನವನ್ನು ಸಂಪರ್ಕಿಸಿ ಸ್ಪಷ್ಟನೆ ಪಡೆದುಕೊಳ್ಳಬೇಕು.
- ತಪ್ಪಾದ ಮಾಹಿತಿಯನ್ನು ಒಳಗೊಂಡ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.
- ದತ್ತಿನಿಧಿಗೆ ಸಂಬಂಧಿಸಿದ ಮಾಹಿತಿಗಾಗಿ ಮಾತ್ರ ಪ್ರತಿಷ್ಠಾನವನ್ನು ಸಂಪರ್ಕಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:-
9591217410, 8152055770, 7795413957










