ಕುಂದಾಪುರ(ಆ,26): ಅಂತರಾಷ್ಟ್ರೀಯಯ ಶಿಕ್ಷಕರ ದಿನಾಚರಣೆ ಅಂಗವಾಗಿ ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘ, ಬೆಂಗಳೂರು ಇವರು ಶೈಕ್ಷಣಿಕ ಮತ್ತು ಸಾಹಿತ್ಯಿಕ ಕ್ಷೇತ್ರದಲ್ಲಿ ಮಾಡಿದ ಸಾಧನೆಗಾಗಿ ಕುಂದಾಪುರದ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಉಪ-ಪ್ರಾಂಶುಪಾಲ ಡಾ. ಚೇತನ್ ಶೆಟ್ಟಿ ಕೋವಾಡಿ ಅವರಿಗೆ ರಾಜ್ಯಮಟ್ಟದ ಶಿಕ್ಷಕರ ರತ್ನ ಪ್ರಶಸ್ತಿಯನ್ನು ಸೆಪ್ಟೆಂಬರ್ 26ರಂದು ಬೆಂಗಳೂರಿನ ಸರಕಾರಿ ಕಲಾ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ನೀಡಿ ಗೌರವಿಸಿದರು.


ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಜಸ್ಟಿಸ್ ಸಂತೋಷ ಹೆಗ್ಡೆ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಈ ಸಂದರ್ಭ ವಿಜಯಪುರದ ವನಶ್ರೀ ಸಂಸ್ಥಾನಮಠದ ಪೀಠಾಧಿಪತಿ ಡಾ. ಜಯಬಸವ ಮಹಾಸ್ವಾಮಿ, ಕರ್ನಾಟಕ ರಾಜ್ಯ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದ ರಾಜ್ಯಾಧ್ಯಕ್ಷ ಶ್ರೀಶೈಲ ಎನ್. ಗಡದಿನ್ನಿ, ಕಾರ್ಯಾಧ್ಯಕ್ಷ ಡಾ. ಜಯಶೀಲ ಶೆಟ್ಟಿ, ಸಂಗನಗೌಡ ಪಾಟೀಲ ಕಲ್ಲೂರ ಮತ್ತಿತರು ಉಪಸ್ಥಿತರಿದ್ದರು.











