ಕುಂದಾಪುರ (ಜ. 26): ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಇವರ ಆಶ್ರಯದಲ್ಲಿ ತಮಿಳುನಾಡಿನ ಪುದುಚೇರಿಯಲ್ಲಿ ಜನವರಿ 25 ರಂದು ನಡೆದ ರಾಷ್ಟ್ರಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿತ್ಮೇಟಿಕ್ ಸ್ಪರ್ಧೆಯಲ್ಲಿ ಕುಂದಾಪುರದ ಎಚ್. ಎಮ್. ಎಮ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಛಾಯಾ ವಿ. ಆರ್ ರವರು ಎ. ಕೆ ಕೆಟಗರಿ ಯಲ್ಲಿ ಚಾಂಪಿಯನ್ ಆಗಿದ್ದಾರೆ.

ರಾಷ್ಟ್ರದ ವಿವಿಧ ಭಾಗಗಳಿಂದ 2200 ವಿದ್ಯಾರ್ಥಿಗಳು ಈ ಸ್ಪರ್ಧೆಯಲ್ಲಿ ಭಾಗವಸಿದ್ದರು. ಈಕೆ ಕುಂದಾಪುರ ಖ್ಯಾತ ಛಾಯಾಚಿತ್ರಗ್ರಾಹಕ ವಿಶ್ವನಾಥ ಮುನ್ನ ಹಾಗೂ ರಜನಿಯವರ ಪುತ್ರಿ.










