ಕುಂದಾಪುರ (ಮಾರ್ಚ್ 7): ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ವಿಸ್ತರಣಾ ಚಟುವಟಿಕೆಯ ಭಾಗವಾಗಿ ಅಧ್ಯಯನಕ್ಕಾಗಿ ವಿದ್ಯಾರ್ಥಿಗಳು ಕೋಟದಲ್ಲಿರುವ ಶಿವರಾಮ ಕಾರಂತ ಥೀಮ್ ಪಾರ್ಕ್ ಗೆ ಭೇಟಿ ನೀಡಿದರು.

ವಿದ್ಯಾರ್ಥಿಗಳು ಥೀಮ್ ಪಾರ್ಕ್ ನಲ್ಲಿರುವ ಗ್ರಂಥಾಲಯಕ್ಕೆ ಭೇಟಿ ನೀಡಿ ಪುಸ್ತಕಗಳ ಕುರಿತು ಮಾಹಿತಿ ಪಡೆದರು. ಕಾರಂತರ ಸಾಹಿತ್ಯ ಕೃಷಿಯ ಕುರಿತು ಉಪನ್ಯಾಸಕರ ಜೊತೆ ಸಂವಾದ ನಡೆಸಿದರು.
ಈ ಸಂದರ್ಭ ಸಂಸ್ಥೆಯ ಉಪ-ಪ್ರಾಂಶುಪಾಲ ಹಾಗೂ ಕನ್ನಡ ವಿಭಾಗದ ಮುಖ್ಯಸ್ಥರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಶ್ರೀಮತಿ ರೇಷ್ಮಾ ಶೆಟ್ಟಿ, ಶ್ರೀಮತಿ ಪ್ರವೀಣಾ ಎಮ್. ಪೂಜಾರಿ ಹಾಗೂ ಥೀಮ್ ಪಾರ್ಕ್ ನ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.











