ಕುಂದಾಪುರ(ಮೇ ,20): ಕುಂದಾಪುರ ಎಜ್ಯುಕೇಶನ್ ಸೊಸೈಟಿ (ರಿ.) ಪ್ರವರ್ತಿತ ವಿ. ಕೆ. ಆರ್. ಆಚಾರ್ಯ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢ ಶಾಲೆಗೆ ಎಸ್. ಎಸ್. ಎಲ್. ಸಿ ಮರುಮೌಲ್ಯಮಾಪನದಲ್ಲಿ ಶೇಕಡಾ 100 ಫಲಿತಾಂಶ ಲಭಿಸಿದೆ.

ಪರೀಕ್ಷೆಗೆ ಹಾಜರಾದ 148 ವಿದ್ಯಾರ್ಥಿಗಳಲ್ಲಿ 76 ವಿದ್ಯಾರ್ಥಿಗಳು ವಿಶಿಷ್ಟ ದರ್ಜೆಯಲ್ಲಿ ಮತ್ತು 72 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ ತೇರ್ಗಡೆ ಹೊಂದಿರುತ್ತಾರೆ. ಭಾರ್ಗವ್ ಆರ್. – 620 ಅಂಕಗಳೊಂದಿಗೆ ರಾಜ್ಯಕ್ಕೆ 6ನೇ ರ್ಯಾಂಕ್, ಅನನ್ಯಾ ಎ ಪೂಜಾರಿ – 619 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ್ಯಾಂಕ್ ಮತ್ತು ಅಲನ್ ಕೆ. ಬಿಜೋಯ್ – 617 ಅಂಕಗಳೊಂದಿಗೆ ರಾಜ್ಯಕ್ಕೆ 9ನೇ ರ್ಯಾಂಕ್ ಗಳಿಸಿರುತ್ತಾರೆ. ಶಾಲಾ ಸಂಚಾಲಕರಾದ ಶ್ರೀ ಬಿ. ಎಮ್. ಸುಕುಮಾರ ಶೆಟ್ಟಿಯವರು ವಿದ್ಯಾರ್ಥಿಗಳನ್ನು ಅಭಿನಂದಿಸಿರುತ್ತಾರೆ.











