ಕುಂದಾಪುರ (ಜೂ.12): ಕುಂದಾಪುರ ಎಜುಕೇಶನ್ ಸೊಸೈಟಿ ಪ್ರವರ್ತಿತ ಎಚ್ಎಂಎಂ ಹಾಗೂ ವಿಕೆಆರ್ ಶಾಲೆಗಳಲ್ಲಿ ಸಮಾಜ ಸೇವಾ ಮನೋಭಾವದಿಂದ ಕಾರ್ಯನಿರ್ವಹಿಸುತ್ತಿರುವ ಸ್ವಾಸ್ಥ್ಯ ಹೆಲ್ತ್ ಕೇರ್ ಸಂಸ್ಥೆಯ ವತಿಯಿಂದ ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿಗಳಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ ನಡೆಯಿತು.

ಶಿಬಿರದಲ್ಲಿ ವೈದ್ಯರು ಸಿಬ್ಬಂದಿಯ ಆರೋಗ್ಯ ತಪಾಸಣೆ ನಡೆಸಿ, ಆರೋಗ್ಯದ ಬಗ್ಗೆ ಅಗತ್ಯ ಸಲಹೆ ಹಾಗೂ ಮಾರ್ಗದರ್ಶನ ನೀಡಿದರು. ಈ ಕಾರ್ಯಕ್ರಮದ ಪ್ರಯೋಜನವನ್ನು ಶಾಲೆಯ ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿಗಳು ಪಡೆದುಕೊಂಡರು. ಶಾಲಾ ಆಡಳಿತ ಮಂಡಳಿಯವರು ಹಾಗೂ ಸಿಬ್ಬಂದಿಗಳು ಸ್ವಾಸ್ಥ್ಯ ಹೆಲ್ತ್ ಕೇರ್ ಸಂಸ್ಥೆಯ ಈ ಸಮಾಜಮುಖಿ ಕಾರ್ಯವನ್ನು ಶ್ಲಾಘಿಸಿದರು.











