ಕುಂದಾಪುರ(ಜೂ,20): ಕುಂದಾಪುರ ಎಜುಕೇಶನ್ ಸೊಸೈಟಿ ಪೂರ್ವ ಪ್ರಾಥಮಿಕ ವಿಭಾಗದ ಹೊಸ ಶೈಕ್ಷಣಿಕ ವರ್ಷದ ಮೊದಲ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಸಂಸ್ಥೆಯ ಉಪ ಪ್ರಾಂಶುಪಾಲರಾದ ಶ್ರೀಮತಿ ಶುಭ ಕೆ ಎನ್ ಮಕ್ಕಳಿಗೆ ಮತ್ತು ಪೋಷಕರಿಗೆ ಆತ್ಮೀಯ ಸ್ವಾಗತ ಕೋರಿ, ಹೊಸ ಶೈಕ್ಷಣಿಕ ವರ್ಷಕ್ಕೆ ಶುಭ ಹಾರೈಸಿದರು.

ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ .ಜಿ. ಭಟ್ ಹಾಗೂ ತರಗತಿ ಶಿಕ್ಷಕರೆಲ್ಲರೂ ಸೇರಿ, ಮಕ್ಕಳಿಗೆ ಆರತಿ ಎತ್ತಿ ಪ್ರೀತಿಯಿಂದ ಬರಮಾಡಿಕೊಂಡರು. ವಿವಿಧ ವಿಭಾಗಗಳ ಮುಖ್ಯಶಿಕ್ಷಕರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.











