ಕುಂದಾಪುರ( ಸೆ ,01): ಮೊಗವೀರ ಯುವ ಸಂಘಟನೆ (ರಿ.) ಉಡುಪಿ ಜಿಲ್ಲೆ, ಕುಂದಾಪುರ ಘಟಕ, ಜಿ.ಶಂಕರ್ ಫ್ಯಾಮಿಲಿ ಟ್ರಸ್ಟ್ (ರಿ.) ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ವ್ ಟ್ರೇಡ್ ಯೂನಿಯನ್ ಉಡುಪಿ ಜಿಲ್ಲೆ ಮತ್ತು ಇಂಡಿಯನ್ ರೆಡ್’ಕ್ರಾಸ್ ಸೊಸೈಟಿ ಕುಂದಾಪುರ ಇವರ ಸಹಯೋಗದೊಂದಿಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರವು ದಿನಾಂಕ 01.09.2026’ನೇ ಮಂಗಳವಾರದಂದು ಕುಂದಾಪುರ ಮೊಗವೀರ ಭವನದಲ್ಲಿ ಜರುಗಿತು.

ಕಾರ್ಯಕ್ರಮ ಉದ್ಘಾಟಿಸಿದ ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷರಾದ ರವೀಶ್ ಎಸ್. ಕೊರವಡಿ ಮಾತನಾಡಿ 18’ರಿಂದ 60’ವರ್ಷ ಒಳಗಿನ ಆರೋಗ್ಯವಂತ ರಕ್ತದಾನಿಗಳು ಪ್ರತೀ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡುವುದರ ಮೂಲಕ ಜೀವ ಉಳಿಸುವ ಈ ಮಾನವೀಯ ಪುಣ್ಯ ಕಾರ್ಯದಲ್ಲಿ ನಿರಂತರವಾಗಿ ತೊಡಗಿಸಿಕೊಳ್ಳುವಂತೆ ಕರೆ ನೀಡಿದರು.ಈ ಸಂದರ್ಭದಲ್ಲಿ ಅತೀ ಹೆಚ್ಚು ಬಾರಿ ರಕ್ತದಾನ ಮಾಡಿದ ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಟ್ರೇಡ್ ಯೂನಿಯನ್ ಇದರ ಜಿಲ್ಲಾಧ್ಯಕ್ಷರಾದ ಅಂಬರೀಶ್ ಭಂಡಾರಿ, ಅವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಮೊಗವೀರ ಯುವ ಸಂಘಟನೆ [ರಿ.] ಉಡುಪಿ ಜಿಲ್ಲೆ ಇದರ ಕುಂದಾಪುರ ಘಟಕದ ಅಧ್ಯಕ್ಷರಾದ ಪ್ರವೀಣ್ ಬಂಗೇರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಇಂಡಿಯನ್ ರೆಡ್’ಕ್ರಾಸ್ ಸೊಸೈಟಿಯ ಚೇರ್ಮನ್ ಜಯಕರ್ ಶೆಟ್ಟಿ, ಕರ್ನಾಟಕ ಟ್ಯಾಕ್ಸಿ ಡ್ರೈವರ್ಸ್ ಟ್ರೇಡ್ ಯೂನಿಯನ್ ಇದರ ರಾಜ್ಯಾಧ್ಯಕ್ಷರಾದ ರಮೇಶ್ ಟಿ.ಟಿ., ಮೊಗವೀರ ಯುವ ಸಂಘಟನೆಯ ಮಾಜಿ ಜಿಲ್ಲಾಧ್ಯಕ್ಷರಾದ ಸದಾನಂದ್ ಬಳ್ಕೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶೇಖರ್ ತೋಳಾರ್, ಕುಂದಾಪುರ ಘಟಕದ ನಿಕಟ ಪೂರ್ವ ಅಧ್ಯಕ್ಷರಾದ ನಾಗೇಶ್ ಹಳನಾಡು ಉಪಸ್ಥಿತರಿದ್ದರು. ಮೊಗವೀರ ಯುವ ಸಂಘಟನೆ ಕುಂದಾಪುರ ಘಟಕದ ಮಾಜಿ ಅಧ್ಯಕ್ಷರಾದ ಚಂದ್ರಹಾಸ ಕೋಣಿ ಸ್ವಾಗತಿಸಿ,ಘಟಕದ ಕಾರ್ಯದರ್ಶಿ ವಿಜಯ್ ಕುಮಾರ್ ವಂದಿಸಿದರು ರಾಕೇಶ್ ಕಾರ್ಯಕ್ರಮ ನಿರ್ವಹಿಸಿದರು.










