ಬೆಂಗಳೂರು (ಫೆ -19) ಬಿಡದಿ ಬಳಿಯಿರುವ ಕದಂಬ ಹೋಟೆಲ್ ಮುಂಭಾಗದಲ್ಲಿ ರಸ್ತೆ ಕ್ರಾಸ್ ಮಾಡುವಾಗ ರಾಜ್ಯ ಮುಜರಾಯಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿಯವರ ಕಾರು ಅಪಘಾತಕ್ಕೆ ಈಡಾಗಿದೆ. ಸಚಿವರ ಇನೋವಾ ಕಾರಿಗೆ ಕೆ.ಎಸ್ ಆರ್.ಟಿ.ಸಿ ಬಸ್ ಡಿಕ್ಕಿ ಹೊಡೆದಿದೆ. ಅದೃಷ್ಟವಶಾತ್, ಅಪಘಾತದಲ್ಲಿ ಸಚಿವರು ಸೇರಿ ಯಾರಿಗೂ ಅಪಾಯವಾಗಿಲ್ಲ. ಅಪಘಾತದಲ್ಲಿ ಸಚಿವರ ಕಾರಿನ ಒಂದು ಭಾಗ ಸಂಪೂರ್ಣ ಜಖಂಗೊಂಡಿದೆ. ಕುಂಬಳಗೂಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.











