ಮಂಗಳೂರು (ಫೆ:20) ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಕರ್ನಾಟಕ ಸರ್ಕಾರ, ರಾಜ್ಯ ಎನ್ನೆಸ್ಸೆಸ್ ಘಟಕ ಹಾಗೂ ಮಂಗಳೂರು ವಿಶ್ವವಿದ್ಯಾಲಯದ ಆಶ್ರಯದಲ್ಲಿ ರಾಷ್ಟ್ರೀಯ ಭಾವೈಕ್ಯತಾ ಶಿಬಿರ ಮಂಗಳೂರಿನ ಪದುವಾ ಕಾಮರ್ಸ್ ಅಂಡ್ ಮ್ಯಾನೇಜ್ಮೆಂಟ್ ಕಾಲೇಜಿನಲ್ಲಿ ಫೆಬ್ರವರಿ 23 ರಿಂದ ಮಾರ್ಚ್ 1ರ ತನಕ ನಡೆಯಲಿದೆ.
ಮಂಗಳೂರು ವಿಶ್ವವಿದ್ಯಾಲಯ ಉಪಕುಲಪತಿಗಳಾದ ಪ್ರೊ .ಪಿ. ಸುಬ್ರಮಣ್ಯ ಯಡಪಡಿತ್ತಾಯ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದು, ಎನ್.ಎಸ್.ಎಸ್. ಭಾರತ ಸರ್ಕಾರ ಬೆಂಗಳೂರು ಇದರ ಪ್ರಾಂತೀಯ ನಿರ್ದೇಶಕರಾದ ಶ್ರೀ ಕೆ. ವಿ. ಖಾದ್ರಿ ನರಸಿಂಹಯ್ಯ, ರಾಜ್ಯ ಎನ್.ಎಸ್.ಎಸ್. ಯೋಜನಾಧಿಕಾರಿ ಗಣನಾಥ ಶೆಟ್ಟಿ ಎಕ್ಕಾರು, ಮಂಗಳೂರು ವಿಶ್ವವಿದ್ಯಾಲಯದ ಕುಲಸಚಿವರಾದ ಶ್ರೀ ರಾಜು ಮೊಗವೀರ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರಲಿದ್ದಾರೆ. ಮಂಗಳೂರು ವಿಶ್ವವಿದ್ಯಾಲಯದ ನಿಕಟಪೂರ್ವ ಎನ್.ಎಸ್.ಎಸ್. ಸಂಯೋಜಕರಾದ ಪ್ರೊ. ವಿನಿತಾ ಕೆ., ಕ್ಯಾಥೋಲಿಕ್ ಬೋರ್ಡ್ ಆಫ್ ಎಜುಕೇಶನ್ ಮಂಗಳೂರು ಇದರ ಕಾರ್ಯದರ್ಶಿಗಳಾದ Rev. Fr. ಅಂತೋನಿ ಶೇರಾ, ಪದುವಾ ಶಿಕ್ಷಣ ಸಂಸ್ಥೆಗಳ ಸಂಚಾಲಕರಾದ Rev. Fr. ವಿನ್ಸೆಂಟ್ ಮೊಂತೆರೋ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.