ಕುಂದಾಪುರ( ಫೆ.23): ಕುಂದಾಪುರದ ಚಿಕ್ಕನ್ ಸಾಲ್ ರಸ್ತೆಯ ಶ್ರೀ ಬಗಳಾಂಬ ತಾಯಿ ದೇವಸ್ಥಾನದ ಪ್ರತಿಷ್ಠಾ ವರ್ಧಂತಿ ಮಹೋತ್ಸವ ದ ಪ್ರಯುಕ್ತ ಬ್ರಹ್ಮಕಲಶಾಭಿಷೇಕ, ಚಂಡಿಕಾಯಾಗ ಶ್ರೀ ಗುರುಪರಾಶಕ್ತಿ ಮಠ, ಮರಕಡದ ಶ್ರೀ ನರೇಂದ್ರನಾಥ ಯೋಗೀಶ್ವರೇಶ್ವರ ಸ್ವಾಮಿಗಳವರ ಅನುಗ್ರಹದೊಂದಿಗೆ ವೇದಮೂರ್ತಿ ಕೆ. ಚಂದ್ರಶೇಖರ ಸೋಮಯಾಜಿಯವರ ನೇತೃತ್ವದಲ್ಲಿ ಧಾರ್ಮಿಕ ವಿಧಿ – ವಿಧಾನಗಳೊಂದಿಗೆ ನೆರವೇರಿತು.
ಪ್ರತಿಷ್ಠಾ ವರ್ಧಂತಿ ಮಹೋತ್ಸವದ ಅಂಗವಾಗಿ ಸಾಮೂಹಿಕ ಪ್ರಾರ್ಥನೆ ಗಣಪತಿಯಾಗ, ಸತ್ಯನಾರಾಯಣ ಪೂಜೆ, ಗುರು ಸನ್ನಿಧಿಯಲ್ಲಿ ನವಕ ಪ್ರಧಾನ ಕಲಶಾಭಿಷೇಕ, ಪರಿವಾರ ದೇವರಿಗೆ ಕಲಶಾಭಿಷೇಕ, ಬ್ರಹ್ಮ ಕಲಶಾಭಿಷೇಕ, ಕಲಾವೃದ್ದಿ ಹೋಮ, ಚಂಡಿಕಾಯಾಗ, ಮಹಾಪೂಜೆ, ಅನ್ನ ಸಂತರ್ಪಣೆ, ಹೂವಿನ ಪೂಜೆ, ರಂಗಪೂಜೆ ಸೇವೆಗಳು ಹಾಗೂ ಭಜನಾ ಕಾರ್ಯಕ್ರಮ ಜರಗಿತು. ಸಹಸ್ರಾರು ಭಕ್ತರು ಶ್ರೀ ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿ ಪ್ರಸಾದ ಸ್ವೀಕರಿಸಿದರು.
ದೇಗುಲದ ಧರ್ಮದರ್ಶಿ ಗಣಪತಿ ಸುವರ್ಣ, ಜಲಜಾ ಸುವರ್ಣ, ಉತ್ಸವ ಸಮಿತಿ ಗೌರವಾಧ್ಯಕ್ಷ ಸೀತಾರಾಮ ಹೇರಿಕುದ್ರು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಪ್ರತಿಷ್ಠಾ ವರ್ಧಂತಿ ಪ್ರಯುಕ್ತ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿತ್ತು.