ಕುಂದಾಪುರ (ಮಾ.4): ಕುಂದಾಪುರ ತಾಲೂಕಿನ ಪುರಾಣಪ್ರಸಿದ್ಧ ಹಾಗೂ ಕಾರಣೀಕ ಶಕ್ತಿ ಕೇಂದ್ರಗಳಲ್ಲಿ ಒಂದಾದ ಸೌಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಗೀತಾನಂದ ಫೌಂಡೇಷನ್ ಇದರ ಪ್ರವರ್ತಕರಾದ ಉದ್ಯಮಿ ಆನಂದ. ಸಿ. ಕುಂದರ್ ಹಾಗೂ ಕಾವ್ರಾಡಿ ಕಲ್ಲೋಳಿಮನೆ ಕೆ. ವಿ. ಬಾಲಚಂದ್ರ ಶೆಟ್ಟಿಯವರು ಕೊಡುಗೆ ರೂಪದಲ್ಲಿ ನಿರ್ಮಿಸಿಕೊಟ್ಟ ಸ್ವಾಗತ ಗೋಪುರದ ಲೋಕಾರ್ಪಣಾ ಕಾರ್ಯಕ್ರಮ ಮಾರ್ಚ್ 3 ರಂದು ನಡೆಯಿತು.
ಈ ಕಾರ್ಯಕ್ರಮಕ್ಕೆ ಉಡುಪಿ ಪಲಿಮಾರು ಮಠದ ಶ್ರೀ ವಿದ್ಯಾಧೀಶ ಶ್ರೀಪಾದರು ಆಗಮಿಸಿ ಸ್ವಾಗತ ಗೋಪುರವನ್ನು ಲೋಕಾರ್ಪಣೆಗೊಳಿಸಿದರು. ಬಸ್ರೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಆಡಳಿತ ಧರ್ಮದರ್ಶಿ ಬಿ. ಅಪ್ಪಣ್ಣ ಹೆಗ್ಡೆ , ಮತ್ತಿತರ ಗಣ್ಯ ವ್ಯಕ್ತಿಗಳು ಹಾಗೂ ಭಕ್ತರು ಈ ಸಂಧರ್ಭದಲ್ಲಿ ಉಪಸ್ಥಿತರಿದ್ದರು.