ಉಡುಪಿ(ಮಾ.6): ಸಂತ ಮೇರಿ ಕಾಲೇಜಿನ ಕಂಪ್ಯೂಟರ್ ಸಾಯನ್ಸ್ ವಿಭಾಗದ ಆಯೋಜನೆಯಲ್ಲಿ ರಕ್ಷಕ-ಶಿಕ್ಷಕ ಸಭೆಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಾಂಶುಪಾಲ ಡಾ| ಹೆರಾಲ್ಡ್ ಐವನ್ ಮೋನಿಸ್ರವರು ವಿದ್ಯಾರ್ಥಿಗಳು ಭವಿಷ್ಯವನ್ನು ರೂಪಿಸುವಲ್ಲಿ ಹೆತ್ತವರು ಹಾಗೂ ಅಧ್ಯಾಪಕರ ಪಾತ್ರ ಬಹಳ ಪ್ರಾಮುಖ್ಯವಾಗಿದೆ. ಇಂದಿನ ಯುವ ಜನತೆಗೆ ಮಾರ್ಗದರ್ಶನ ಮಾಡುವಾಗ ಬಹಳ ಎಚ್ಚರಿಕೆಯ ಹೆಜ್ಜೆಗಳನ್ನು ಇಡಬೇಕಾದ ಅನಿವಾರ್ಯತೆ ಇದೆ, ಯುವಜನತೆಯ ಮನಸ್ಸನ್ನು ಇಂದಿನ ಜಗತ್ತು ನಾನಾ ಧುಶ್ಚಟಗಳಿಗ್ಗೆ ಸೆಳೆಯುತ್ತಿದೆ ಇದರಿಂದ ದೂರವಿರಿಸಿ ಆರೋಗ್ಯಪೂರ್ಣ ಜೀವನದೆಡೆ ಕೊಂಡೊಯ್ಯುವಲ್ಲಿ ಹೆತ್ತವರು ಹಾಗೂ ಅಧ್ಯಾಪಕರು ತಮ್ಮ ಹೆಚ್ಚಿನ ಗಮನವನ್ನು ವಹಿಸಬೇಕಾದ ಅಗತ್ಯವಿದೆ ಎಂದು ಅವರು ಹೇಳಿದರು.
ಕಳೆದ ಬಾರಿ ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಹೆಚ್ಚಿನ ವಿದ್ಯಾರ್ಥಿಗಳು ಕ್ಯಾಂಪಸ್ ಆಯ್ಕೆ ಮತ್ತು ಉನ್ನತ ವಿದ್ಯಾಭ್ಯಾಸ ಮಾಡುತ್ತಿರುವುದು ವಿಭಾಗಕ್ಕೆ ಒಂದು ಹೆಮ್ಮೆಯ ಗರಿಯಂತೆ ಎಂದು ತಿಳಿಸಿದರು. ಈ ಬಾರಿಯೂ ವಿವಿಧ ಕ್ಯಾಂಪಸ್ ಆಯ್ಕೆ ಪ್ರಕ್ರಿಯೆಗಳು ಬಿ.ಸಿ.ಎ. ವಿಭಾಗದ ವಿದ್ಯಾರ್ಥಿಗಳಿಗೆ ಇಂದಿನ ಸಂಕಷ್ಟದ ಕಾಲದಲ್ಲಿಯೂ ಇರುವುದು ಗಮನಾರ್ಹ ಎಂದು ಪ್ರಶಂಸನೀಯವಾದ ಮಾತುಗಳನ್ನಾಡಿದರು.
ಇದೇ ಸಂಧರ್ಭದಲ್ಲಿ ಹೆತ್ತವರಿಗೆ ವಿಧ್ಯಾರ್ಥಿಗಳ ಪ್ರಗತಿ ಪತ್ರದ ಪರಿಶೀಲನೆ ಮತ್ತು ಹಾಜರಾತ್ರಿ ವಿವರಗಳನ್ನು ವಿಭಾಗದ ವತಿಯಿಂದ ನೀಡಲಾಯಿತು. ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಜ್ಞಾನ ವಿಭಾಗದ ಮುಖ್ಯಸ್ಥ ಮತ್ತು ಮಾಹಿತಿ ತಂತ್ರಜ್ಞಾನ ಕೋಶದ ನಿರ್ದೇಶಕರಾದ ಲೆಫ್ಟಿನೆಂಟ್ ಶ್ರೀ ಕೆ. ಪ್ರವೀಣ್ ಕುಮಾರ್, ಉಪನ್ಯಾಸಕರಾದ ಶ್ರೀಮತಿ ದಿವ್ಯಶ್ರೀ, ಶ್ರೀಮತಿ ಸುಷ್ಮಾ, ಶ್ರೀ. ಪ್ರಕಾಶ್, ಹೆತ್ತವರು ಹಾಗೂ ಪೋಷಕರು, ವಿದ್ಯಾರ್ಥಿಗಳು, ಕಾಲೇಜಿನ ಅಧ್ಯಾಪಕ ಮತ್ತು ಅಧ್ಯಾಪಕೇತರ ಬಂಧುಗಳು ಉಪಸ್ಥಿತರಿದ್ದರು. ಕು. ಪ್ರಿಯಾಂಕ ಮತ್ತು ಬಳಗದವರು ಪ್ರಾರ್ಥಿಸಿದರು. ಕು. ಕೃಪಾ ಸ್ವಾಗತಿಸಿ, ಕು. ಶೋಭಿತ ವಂದಿಸಿ, ಕು.ದಾಕ್ಷಾಯನಿ ಕಾರ್ಯಕ್ರಮ ನಿರೂಪಿಸಿದರು.