ಕುಂದಾಪುರ (ಮಾ.13) ಬಾಲ್ಯದಿಂದಲೇ ಕ್ರಿಕೆಟ್ ನಲ್ಲಿ ಸಾಧನೆ ಮಾಡಬೇಕೆಂಬ ಹಂಬಲದಿಂದ ನಿರಂತರ ಶ್ರಮವಹಿಸಿ ಇಂದು ಕರ್ನಾಟಕ ಕ್ರಿಕೆಟ್ ತಂಡದಲ್ಲಿ ಕುಂದಾಪುರದ ಮೂಲದ ಯುವಕ ತ್ರಿವರ್ಣ ಕಂಡ್ಲೂರು ತಮ್ಮ ಸ್ಥಾನವನ್ನು ಗಿಟ್ಟಿಸಿಕೊಂಡಿದ್ದಾರೆ.
ಬ್ಯಾಟಿಂಗ್ನಲ್ಲಿ ಉತ್ತಮ ಹಿಡಿತವನ್ನು ಹೊಂದಿರುವ ಇವರು ಕುಂದಾಪುರದ ಕನ್ನಿಕಾ ಸ್ಪೋರ್ಟ್ಸ್ ಕ್ಲಬ್ ಸದಸ್ಯರಾಗಿದ್ದು ಇದೇ ಮಾರ್ಚ್ 21 ರಿಂದ 23 ತನಕ ರಾಜ್ಯಸ್ಥಾನದ ಜೈಪುರ್ ನಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯ ತಂಡವನ್ನು ಇವರು ಪ್ರತಿನಿಧಿಸಲಿದ್ದಾರೆ. ಎಂಸಿಎ ಸ್ನಾತಕೋತ್ತರ ಪದವಿಯನ್ನು ಪಡೆದಿರುವ ಇವರು ಪ್ರಸ್ತುತ ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಕಾಲೇಜಿನ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.