ಕುಂದಾಪುರ, ಮಾರ್ಚ್( 19): ಬರಿ ಪದಕ್ಕೆ ಪದ ಸೇರಿಸಿ ಹಾಡು ಕಟ್ಟಿ, ಒಂದೊಂದು ಅಕ್ಷರವನ್ನೂ ತುಂಬಾ ಅನುಭವಿಸಿ ಭಾವಗಳನ್ನೇ ಎದೆಗಿಳಿಸಿದ ಕವಿ ಡಾ.ಎನ್.ಎಸ್. ಲಕ್ಷ್ಮೀನಾರಾಯಣ ಭಟ್ಟರ ಗೀತೆಗಳು ಬದುಕಿನ ಗೀತೆಗಳು ಎಂದು ಸಾಂಸ್ಕೃತಿಕ ಚಿಂತಕ ಶ್ರೀ ಮುಸ್ತಾಕ್ ಹೆನ್ನಾಬೈಲು ಹೇಳಿದರು.
ಇವರು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾರ್ಚ್ 17ರಂದು ಸಾಹಿತ್ಯ ವೇದಿಕೆ ಆಯೋಜಿಸಿದ್ದ ಭಾವಭಂಗದ ಶೃಂಗ ಕವಿ ಡಾ. ಎನ್ ಎಸ್ ಲಕ್ಷ್ಮೀನಾರಾಯಣ ಭಟ್ಟರಿಗೆ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ಸಾಹಿತಿ ಹಾಗೂ ಸಾಂಸ್ಕೃತಿಕ ಸಂಘಟಕಿಯಾದ ಶ್ರೀಮತಿ ದಿವ್ಯಾ ಶ್ರೀಧರ್ ರಾವ್ ಬೆಂಗಳೂರು ಡಾ. ಎನ್. ಎಸ್. ಲಕ್ಷ್ಮೀನಾರಾಯಣ ಭಟ್ಟರ ಬದುಕಿನ ಕುರಿತು ಮಾತನಾಡಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೋ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಸಾಹಿತ್ಯ ವೇದಿಕೆಯ ಸಂಯೋಜಕ, ಕನ್ನಡ ಉಪನ್ಯಾಸಕರಾದ ಶ್ರೀ ಸುಕುಮಾರ ಶೆಟ್ಟಿ ಕಮಲಶಿಲೆ ಸ್ವಾಗತಿಸಿದರು, ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಸಿದರು.ಸಾಹಿತ್ಯ ವೇದಿಕೆಯ ಸಹ ಸಂಯೋಜಕಿ, ಸಂಸ್ಕೃತ ಉಪನ್ಯಾಸಕಿ ಶ್ರೀಮತಿ ಸುಧಕ್ಷಿಣಾ ಎ.ಎಸ್. ಅತಿಥಿಗಳನ್ನು ಪರಿಚಯಿಸಿದರು. ಸಹ ಸಂಯೋಜಕಿ, ಉಪನ್ಯಾಸಕಿ ಆಶಾ ಶೆಟ್ಟಿ ವಂದಿಸಿದರು. ಇಂಗ್ಲೀಷ್ ಉಪನ್ಯಾಸಕಿ ಅಮ್ರತಾ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ವಿಧ್ಯಾರ್ಥಿನಿಯರು ಡಾ। ಎನ್.ಎಸ್ ಲಕ್ಷ್ಮೀನಾರಾಯಣ ಭಟ್ಟರ ಭಾವಗೀತೆಗಳನ್ನು ಪ್ರಸ್ತುತ ಪಡಿಸಿದ್ದರು. ಸಾಹಿತ್ಯ ವೇದಿಕೆಯ ವಿಧ್ಯಾರ್ಥಿ ಪ್ರತಿನಿಧಿಗಳಾದ ದರ್ಶನ್ ಭಂಡಾರಿ ಹಾಗೂ ನೇತ್ರಾವತಿ ಉಪಸ್ಥಿತರಿದ್ದರು.