ಕುಂದಾಪುರ (ಮಾ. 22): ಸಂಸ್ಕೃತಿ, ಆಚರಣೆಗಳು ಕೇವಲ ಒಂದು ದಿನಕ್ಕಷ್ಟೇ ಸೀಮಿತವಾಗಬಾರದು. ಧಾರ್ಮಿಕ ಕಾರ್ಯಕ್ರಮಗಳಿಗಾದರೂ ಸಾಂಪ್ರದಾಯಿಕ ಉಡುಗೆ ತೊಡುವಂತಾಗಬೇಕು. ಆ ಮೂಲಕ ನಮ್ಮ ಸಂಸ್ಕೃತಿ ಆಚಾರ ವಿಚಾರಗಳು ಉಳಿಯುವಂತಾದರೆ ಈ ದಿನದ ಆಚರಣೆ ಅರ್ಥಪೂರ್ಣವಾಗುತ್ತದೆ ಎಂದು ಅಂತರಾಷ್ಟ್ರೀಯ ನಿರೂಪಕ ಶ್ರೀ ನಿತೇಶ್ ಶೆಟ್ಟಿ ಎಲ್ಲಾರ್ ಹೇಳಿದರು. ಇವರು ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನ ಸಮಿತಿಯ ಆಶ್ರಯದಲ್ಲಿ ನಡೆದ ಸಾಂಪ್ರದಾಯಿಕ ದಿನಾಚರಣೆಯಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದರು.
ಕುಂದಾಪುರ ಲಯನ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀ ಚಂದ್ರಶೇಖರ ಕಲ್ಪತರು ಭತ್ತಕುಟ್ಟುವ ಮೂಲಕ ವಿಶಿಷ್ಟವಾಗಿ ಕಾರ್ಯಕ್ರಮ ಉದ್ಘಾಟಿಸಿದರು.ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಕೆ.ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಸ್ವಾಗತಿಸಿ, ಪ್ರಾಸ್ತಾವಿಸಿದರು.ವಿದ್ಯಾರ್ಥಿ ಕ್ಷೇಮಪಾಲನ ಸಮಿತಿಯ ಕಾರ್ಯದರ್ಶಿ ಸಂಪತ್ ಅತಿಥಿಗಳನ್ನು ಪರಿಚಯಿಸಿದರು. ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಶಿವರಾಜ್. ಸಿ .ನಾವುಂದ ವಂದಿಸಿದರು. ಕಾರ್ಯಕ್ರಮ ಸಂಯೋಜಕರಾದ ಸತೀಶ್ ಶೆಟ್ಟಿ ಹೆಸ್ಕತ್ತೂರ್ ನಿರೂಪಿಸಿದರು.
ಇದೇ ಸಂದರ್ಭದಲ್ಲಿ ನಡೆದ ಪ್ರಾಚ್ಯ ವಸ್ತು ಪ್ರದರ್ಶನ ಸ್ಪರ್ಧೆಯಲ್ಲಿ ಹನ್ನೆರಡು ತಂಡಗಳು ಭಾಗವಾಹಿಸಿದ್ದು, ಬಿ.ಸಿ.ಎ. ತಂಡ ಮೊದಲ ಬಹುಮಾನವನ್ನು ,ಪ್ರಥಮ ಬಿ.ಕಾಂ, ‘ಬಿ’ ದ್ವಿತೀಯ ಹಾಗೂ ತೃತೀಯ ಬಿ.ಕಾಂ ‘ಸಿ ತೃತೀಯ ಬಹುಮಾನ ಪಡೆದರು.