ಕುಂದಾಪುರ (ಏ, 26): ದೇಶದಾದ್ಯಂತ ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಲಸಿಕೆ ನೀಡುತ್ತಿರುವ ಹಿನ್ನಲೆಯಲ್ಲಿ ಮುಂದಿನ 60 ದಿನಗಳ ವರೆಗೆ ರಕ್ತದಾನ ಮಾಡಲು ಸಾಧ್ಯವಾಗದಿರುವುದರಿಂದ ಹಾಗೂ ಆ ಸಂಧರ್ಬದಲ್ಲಿ ರಕ್ತದ ಅಭಾವ ಉಂಟಾಗುವ ಸಾಧ್ಯತೆ ಇರುವುದರಿಂದ ಬಿಜೆಪಿ ಯುವಮೋರ್ಚಾ ಕುಂದಾಪುರ ಮಂಡಲ ವತಿಯಿಂದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ- ರಕ್ತ ನಿಧಿ ಕೇಂದ್ರ ಕುಂದಾಪುರ, ಇವರ ಸಹಯೋಗದೊಂದಿಗೆ ಎಪ್ರಿಲ್ 27 ರ ಮಂಗಳವಾರ ಸಮಯ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 3.30 ತನಕ ಕುಂದಾಪುರದ ಆರ್.ಎನ್.ಶೆಟ್ಟಿ ಸಭಾಂಗಣದಲ್ಲಿ ಬ್ರಹತ್ ರಕ್ತದಾನ ಶಿಬಿರ ಹಮ್ಮಿಕೊಂಡಿದ್ದಾರೆ.
ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನ ಶಿಬಿರದಲ್ಲಿ ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಂಪರ್ಕ ಸಂಖ್ಯೆ: 98448 02201, 9902706892, 9110879488, 9483362333
9901353952, 9902932711.