ಬೆಂಗಳೂರು (ಜೂ, 22): ರಾಜ್ಯದಲ್ಲಿನ ಕಾಲೇಜು ಉಪನ್ಯಾಸಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕೆ ನೀಡಿ ಕಾಲೇಜುಗಳನ್ನು ಪುನರಾರಂಭಿಸಲು ಸರ್ಕಾರ ಚಿಂತನೆ ನಡೆಸಿದೆ. ಜೂನ್ 22 ರ ಮಂಗಳವಾರ ದಂದು ಕರೋನಾ 3 ನೇ ಅಲೆಯ ಕುರಿತು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಾಗೂ ಡಾ|ದೇವಿ ಶೆಟ್ಟಿ ನೇತೃತ್ವದಲ್ಲಿ ನಡೆಸಲಾದ ಉನ್ನತಮಟ್ಟದ ಸಮಿತಿಯ ಸದಸ್ಯರ ಸಭೆಯಲ್ಲಿ ಈ ಕುರಿತು ಚರ್ಚಿಸಲಾಗಿದೆ.
ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕ ವೃಂದದವರಿಗೆ ಶೀಘ್ರದಲ್ಲಿಯೇ ಕೋವಿಡ್ ಲಸಿಕೆ ನೀಡಲು ಕ್ರಮಗಳನ್ನು ಹಾಗೂ ಪೂರ್ವಸಿದ್ಧತೆಯನ್ನು ಸರಕಾರ ಕೈಗೊಳ್ಳಲಿದ್ದು, ಅಲ್ಲಿಯತನಕ ವಿದ್ಯಾರ್ಥಿಗಳಿಗೆ ಆನ್ ಲೈನ್ ತರಗತಿಗಳು ಮುಂದುವರಿಯಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ .
ಈ ಸಂಧರ್ಭದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಸಿ. ಎನ್. ಅಶ್ವತ್ಥನಾರಾಯಣ ಮಾತನಾಡಿ ಕಾಲೇಜುಗಳನ್ನು ಪುನರಾರಂಭಿಸಲು ನಾವು ಪೂರ್ವ ಸಿದ್ಧತೆಗಳನ್ನು ನಡೆಸುತ್ತಿದ್ದು, ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ವಿಶೇಷವಾದ ಮಹಾ ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಿದ್ದೇವೆ ಎಂದು ಹೇಳಿದರು.