ಕುಂದಾಪುರ (ಜೂ, 28): ರಾಜ್ಯದಲ್ಲಿ ಪದವಿ ಕಾಲೇಜುಗಳನ್ನು ಶೀಘ್ರದಲ್ಲೇ ಪುನರಾರಂಭಿಸಲು ಸರ್ಕಾರ ನಿರ್ಧಾರ ಕೈಗೊಂಡ ಹಿನ್ನೆಲೆಯಲ್ಲಿ ವಿವಿಧ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ಆರೋಗ್ಯ ಇಲಾಖೆಯ ವತಿಯಿಂದ ಉಚಿತ ಕರೋನಾ ಲಸಿಕೆ ನೀಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಆ ನಿಟ್ಟಿನಲ್ಲಿ ಕುಂದಾಪುರದ ಡಾ.ಬಿ.ಬಿ.ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಜೂನ್ 28 ರಂದು ಕರೋನಾ ಲಸಿಕಾ ಅಭಿಯಾನ ಪ್ರಾರಂಭವಾಗಿದ್ದು ಮೊದಲ ದಿನದಂದು 200 ಡೋಸ್ ಲಸಿಕೆಯನ್ನು ನೀಡಲಾಗಿದೆ.
ಕುಂದಾಪುರ ತಾಲೂಕು ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ರಾಜೇಶ್ವರಿ, ನೋಡಲ್ ಅಧಿಕಾರಿ ಡಾ.ಲತಾ ನಾಯಕ್ ರವರ ಮಾರ್ಗದರ್ಶನದಲ್ಲಿ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಪ್ರೋ.ಕೆ.ಉಮೇಶ್ ಶೆಟ್ಟಿ, ಉಪ ಪ್ರಾಂಶುಪಾಲ ಶ್ರೀ ಚೇತನ್ ಶೆಟ್ಟಿ ಕೋವಾಡಿ ಹಾಗೂ ಕಾಲೇಜಿನ ಬೋಧಕ- ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.