ಕುಂದಾಪುರ (ಜು, 02): ದ್ವಿತೀಯ ಪಿ.ಯು.ಸಿ ವ್ಯಾಸಂಗ ಮುಗಿಸಿದ ನಂತರ 2021-2022 ನೇ ಸಾಲಿನಲ್ಲಿ ವೃತ್ತಿಪರ ಶಿಕ್ಷಣ (ನರ್ಸಿಂಗ್, ಪ್ಯಾರಾ ಮೆಡಿಕಲ್, ಫುಡ್ ಟೆಕ್ನಿಷಿಯನ್, ಹೋಟೆಲ್ ಮ್ಯಾನೇಜ್ಮೆಂಟ್ ಇತ್ಯಾದಿ) ಕೋರ್ಸ್ ನ್ನು ಆಯ್ಕೆ ಮಾಡಿಕೊಳ್ಳುವ ವಿದ್ಯಾರ್ಥಿಗಳಿಗೆ ಜೈ ಕುಂದಾಪ್ರ ಸೇವಾ ಟ್ರಸ್ಟ್ (ರಿ) ಕುಂದಾಪುರದ ವತಿಯಿಂದ “ವಿದ್ಯಾರ್ಥಿವೇತನ” ಹಾಗೂ ಸಹಾಯಧನವನ್ನು ನೀಡುವ ಕಲಿಕೆಗೆ ಆಸರೆ ಎನ್ನುವ ಯೋಜನೆಯನ್ನು ಹಮ್ಮಿಕೊಳ್ಳಲಾಗಿದೆ.

ಆಸಕ್ತ ವಿದ್ಯಾರ್ಥಿಗಳು ಈ ಯೋಜನೆಯ ಸದುಪಯೋಗ ಪಡೆದು ಕೊಳ್ಳ ಬೇಕೆಂದು ಜೈ ಕುಂದಾಪ್ರ ಸೇವಾ ಟ್ರಸ್ಟ್(ರಿ.) ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ನಮ್ಮ ಟ್ರಸ್ಟಿನ ಪದಾಧಿಕಾರಿ ಅಶೋಕ್ ಕುಮಾರ್ 9980666982 ರವರನ್ನು ಸಂಪರ್ಕಿಸಲು ಸೂಚಿಸಲಾಗಿದೆ.










