ಕಲ್ಯಾಣಪುರ(ಜು ,16): ಇಲ್ಲಿನ ಮಿಲಾಗ್ರಿಸ್ ಕಾಲೇಜಿನ ಎನ್.ಎಸ್.ಎಸ್. ಘಟಕದ ವತಿಯಿಂದ ಜುಲೈ 15 ರ ಗುರುವಾರದಂದು ವಿದ್ಯಾರ್ಥಿಗಳಿಗೆ ಕೃಷಿಯ ಬಗ್ಗೆ ಅರಿವು ಮೂಡಿಸುವ ಅಂಗವಾಗಿ ಕೊಡಂಕೂರು ಪರಿಸರದ ಗದ್ದೆಯಲ್ಲಿ ನಾಟಿ ಕಾರ್ಯ ಹಾಗೂ ಕಡೆಕಾರು ಪರಿಸರದಲ್ಲಿ ನಾಟಿ ಮಾಡಿದ ಗದ್ದೆಯಲ್ಲಿ ಬೆಳೆದಿರುವ ಕಳೆಯನ್ನು ಕೀಳುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.
ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಇದರ ಸಹಯೋಗದಲ್ಲಿ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಕೆದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಇದರ ಕೋಶಾಧಿಕಾರಿಗಳಾದ ಶ್ರೀ ರಾಘವೇಂದ್ರ ಕಿಣಿ ಯವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕೇದಾರೋತ್ಥಾನ ಟ್ರಸ್ಟ್ (ರಿ) ಉಡುಪಿ ಇದರ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮುರಳಿ ಕಡೆಕಾರ್ ಇವರು ಉಪಸ್ಥಿತರಿದ್ದು ಯುವ ಜನತೆಗೆ ಕ್ರಷಿ ಚಟುವಟಿಕೆಗಳಲ್ಲಿ ಭಾಗವಹಿಸುವುದು ಈ ದಿನಗಳಲ್ಲಿ ಅಗತ್ಯವಾಗಿದ್ದು, ಕೃಷಿಕರ ನೋವು ನಲಿವುಗಳನ್ನು ತಿಳಿದುಕೊಳ್ಳಬೇಕಾದರೆ ಸ್ವತಃ ನಾವೇ ಕೃಷಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಆರ್ಥವಾಗುತ್ತದೆ. ಹಾಗೆಯೇ ಕೃಷಿಯ ಬಗ್ಗೆ ವಿದ್ಯಾರ್ಥಿಗಳು ಒಲವು ಮೂಡಿಸಿಕೊಳ್ಳಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಶ್ರೀ ರಘುಪತಿ ಭಟ್ ರವರು ಕಾಲೇಜಿನ ಈ ಕಾರಕ್ರಮಕ್ಕೆ ಶುಭ ಸಂದೇಶ ತಿಳಿಸಿದರು. ಸ್ಥಳೀಯ ನಗರ ಸಭಾ ಸದಸ್ಯರಾದ ಶ್ರೀಮತಿ ಸಂಪಾವತಿ, ಕಾರ್ಯಕ್ರಮಕ್ಕೆ ಸಹಕರಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ವಿನ್ಸೆಂಟ್ ಆಳ್ವ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಸ್ವಯಂಸೇವಕರ ಜೊತೆ ಕ್ರಷಿ ಚಟುವಟುಕೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರು. ಕಾಲೇಜಿನ ಐ ಕ್ಯೂ ಎ ಸಿ ಸಂಚಾಲಕರಾದ ಡಾ. ಜಯರಾಮ್ ಶೆಟ್ಟಿಗಾರ್ , ಸಾರ್ವಜನಿಕ ಸಂಪರ್ಕಾಧಿಕಾರಿ ಶ್ರೀ ರವಿನಂದನ್ ಭಟ್, ಎನ್.ಎಸ್.ಎಸ್. ಅಧಿಕಾರಿಗಳಾದ ಶ್ರೀಮತಿ ಅನುಪಮಾ ಜೋಗಿ ಮತ್ತು ಶ್ರೀ ಮೆಲ್ಸನ್ ಡಿಸೋಜ ರವರು ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಎನ್ ಎಸ್ ಎಸ್ ಘಟಕದ ನಾಯಕರು ಹಾಗೂ ಸ್ವಯಂಸೇವಕರು ಕಾರ್ಯಕ್ರಮದಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.