ಕೊಲ್ಲೂರು (ಆ, 03) : ಇಲ್ಲಿನ ಶ್ರೀಮೂಕಾಂಬಿಕಾ ದೇವಳದ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ಆಗಸ್ಟ್,03ರಂದು ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತು ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ಕುವೆಂಪು ವಿಶ್ವವಿದ್ಯಾನಿಲಯದ ರಾಜ್ಯಶಾಸ್ತ್ರ ವಿಭಾಗದ ವಿಶ್ರಾಂತ ಮುಖ್ಯಸ್ಥರಾದ ಪ್ರೊ ಡಾ. ಜೆ. ಎಸ್. ಸದಾನಂದ ರವರು ಭೇಟಿ ನೀಡಿ, ಹೊಸ ಶಿಕ್ಷಣ ನೀತಿ ಯ ಬಗ್ಗೆ ಮಾಹಿತಿಯನ್ನು ನೀಡಿದರು. ನಂತರ ಪ್ರೊ. ಡಾ. ಜೆ ಎಸ್ ಸದಾನಂದ ರವರನ್ನು ಕಾಲೇಜಿನ ಪರವಾಗಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಅವರ ಧರ್ಮಪತ್ನಿ ಡಾIನಿರ್ಮಲಾ,ಮಗಳು ಮೈಥಿಲಿ ಕಾಲೇಜಿನ ಪ್ರಾಂಶುಪಾಲ ಶ್ರೀ ಅರುಣ್ ಪ್ರಕಾಶ್ ಶೆಟ್ಟಿ, ಕಾಲೇಜಿನ ಭೋಧಕ ಹಾಗೂ ಭೋಧಕೇತರ ವೃಂದದವರು ಹಾಗೂ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.