ಶಿರ್ವ(ಆ,19): ಇಲ್ಲಿನ ಸಂತ ಮೇರಿ ಮಹಾವಿದ್ಯಾಲಯದಲ್ಲಿ 2021ರ ಆಗಸ್ಟ್ 18ರಂದು ರಾಷ್ಟ್ರೀಯ ಸದ್ಭಾವನ ದಿನಾಚರಣೆ ಹಾಗೂ ಪ್ರತಿಜ್ಞಾ ಸ್ವೀಕಾರ ಕಾರ್ಯಕ್ರಮವನ್ನು ಆಚರಿಸಲಾಯಿತು.
ಕಾಲೇಜಿನ ಪ್ರಾಂಶುಪಾಲರಾದ ಡಾ| ಹೆರಾಲ್ಡ್ ಐವನ್ ಮೋನಿಸರವರು ಪ್ರತಿಜ್ಞಾ ವಿಧಿಯನ್ನು ಬೋಧಿಸಿ, ಎಲ್ಲಾ ಧರ್ಮ, ಭಾಷೆಗಳ ಜನರಲ್ಲಿ ರಾಷ್ಟ್ರೀಯ ಏಕೀಕರಣ, ಕೋಮು ಸೌಹಾರ್ದತೆಯನ್ನು ಉತ್ತೇಜಿಸಿ, ಎಲ್ಲರಲ್ಲೂ ಸದ್ಭಾವನೆಯನ್ನು ಮೂಡಿಸಿ ಹಿಂಸಾಚಾರವನ್ನು ತ್ಯಜಿಸುವಂತೆ ಮಾಡಲು ಪ್ರತಿವರ್ಷಆಗಸ್ಟ್ 20ರಂದು ಸದ್ಭಾವನಾ ದಿನವನ್ನು ಆಚರಿಸಲಾಗುತ್ತದೆ. ಆದರೆ ಈ ವರ್ಷ ಆಗಸ್ಟ್ 20ರಂದು ಮೊಹರಂ ಹಬ್ಬದ ಪ್ರಯುಕ್ತ ಎಲ್ಲ ಸರ್ಕಾರಿ ಕಚೇರಿಗಳ ರಜೆಯ ಕಾರಣ ಈ ಕಾರ್ಯಕ್ರಮವನ್ನು ಇಂದು ಆಚರಿಸಲಾಯಿತು ಎಂದು ಹೇಳಿದರು.
ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿರ್ದೇಶಕಿ ಕು. ಯಶೋಧ, ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಶ್ರೀ ಕೆ.ಪ್ರವೀಣ್ಕುಮಾರ್,ಎನ್ಎಸ್ಎಸ್ ಯೋಜನಾಧಿಕಾರಿ ಶ್ರೀ ಪ್ರೇಮನಾಥ್, ಕು.ರಕ್ಷಾ, ರೋವರ್ಸ್ ಮತ್ತು ರೇಂಜರ್ಸ್ ಸ್ಕೌಟ್ ಲೀಡರ್ ಗಳಾದ ಶ್ರೀ ಪ್ರಕಾಶ್, ಶ್ರೀಮತಿ ಸಂಗೀತ ಪೂಜಾರಿ,ಭೋಧಕ ಹಾಗು ಭೋಧಕೆತರ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.