ಕುಂದಾಪುರ (ಆ,20): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕುಂದಾಪುರದ ಡಾ| ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್ಸಿಸಿ ಘಟಕದ ವತಿಯಿಂದ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿರುವ ಕುಂದಾಪುರದ ಯೋಧ ಪ್ರದೀಪ್ ಖಾರ್ವಿ ಯವರನ್ನು ಸಂಸ್ಥೆಯ ಸಂಸ್ಥಾಪಕರು ಮತ್ತು ಬೈಂದೂರು ಶಾಸಕರಾದ ಬಿ.ಎಂ.ಸುಕುಮಾರ ಶೆಟ್ಟಿಯವರು ಸನ್ಮಾನಿಸಿ ಗೌರವಿಸಿದರು.
ನಂತರ ಮಾತನಾಡಿದ ಅವರು ಪ್ರದೀಪ್ ಖಾರ್ವಿಯವರು ಯುವ ಸಮುದಾಯಕ್ಕೆ ಪ್ರೇರಣೆ, ನಮ್ಮ ಭಾಗದಲ್ಲಿ ಇನ್ನಷ್ಟು ಸಂಖ್ಯೆಯ ಯುವಕ ಯುವತಿಯರು ಸೈನ್ಯಕ್ಕೆ ಸೇರುವಂತಾಗಲಿ ಎಂದು ಶುಭ ಹಾರೈಸಿದರು. ಸಂಸ್ಥೆಯ ಆಡಳಿತ ಮಂಡಳಿ ಸದಸ್ಯರಾದ ಹುಂತ್ರಿಕೆ ಸುಧಾಕರ ಶೆಟ್ಟಿಯವರು ಮತ್ತು ಪ್ರಾಂಶುಪಾಲರಾದ ಪ್ರೋ.ಕೆ. ಉಮೇಶ್ ಶೆಟ್ಟಿಯವರು ಯೋಧರಿಗೆ ಶುಭ ಹಾರೈಸಿದರು.
ಕಾಲೇಜಿನ ಬೋಧಕ ಮತ್ತು ಬೋಧಕೇತರರು ಉಪಸ್ಥಿತರಿದ್ದು, ಎನ್ಸಿಸಿ ಅಧಿಕಾರಿ ಶಿವರಾಜ್ ಅರೆಹೊಳೆ ಅತಿಥಿ ಪರಿಚಯಿಸಿದರು. ಉಪಪ್ರಾಂಶುಪಾಲರಾದ ಕೋವಾಡಿ ಚೇತನ್ ಶೆಟ್ಟಿ ವಂದಿಸಿದರು. ಉಪನ್ಯಾಸಕಿ ನಿಷಾ ಶೆಟ್ಟಿ ನಿರೂಪಿಸಿದರು.