ಶಿರೂರು(ಸೆ,18): ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿಜಿಯವರ ಜನ್ಮ ದಿನದ ಪ್ರಯುಕ್ತ
ಭಾರತೀಯ ಜನತಾ ಪಾರ್ಟಿ ಬೈಂದೂರು ಮಂಡಲ ಶಿರೂರು ಮಹಾಶಕ್ತಿ ಕೇಂದ್ರ ವತಿಯಿಂದ “ಸೇವೆ ಮತ್ತು ಸಮರ್ಪಣಾ ಅಭಿಯಾನ”ದ ಅಂಗವಾಗಿ ಶಾಸಕರಾದ ಬಿ. ಎಂ. ಸುಕುಮಾರ್ ಶೆಟ್ಟಿಯವರು
ಶಿರೂರಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಟ್ರೀ ಗಾರ್ಡ್ ಕೊಡುಗೆ ನೀಡಿದರು.

ಕಳೆದ ಎಂಟು ವರ್ಷಗಳಲ್ಲಿ ದೇಶದ ಪ್ರಸಿದ್ದಿ ಜಗತ್ತಿನಾದ್ಯಂತ ಪಸರಿಸಿದೆ. ನರೇಂದ್ರ ಮೋದಿಯವರು ಪ್ರಧಾನಿಯಾದ ಬಳಿಕ ಈ ದೇಶ ಅತ್ಯಂತ ಅಭಿವೃದ್ಧಿಯ ಪಥದತ್ತ ಸಾಗಿದೆ ಎಂದು ಶಾಸಕರು ಹೇಳಿದರು.

ಈ ಸಂದರ್ಭದಲ್ಲಿ ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಸುರೇಶ್ ಬಟವಾಡಿ ,ಮಂಡಲ ಉಪಾಧ್ಯಕ್ಷರಾದ ಶ್ರೀ ಗಣೇಶ ಗಾಣಿಗ, ತಾಲೂಕು ಪಂಚಾಯತ್ ಸದಸ್ಯರಾದ ಪುಷ್ಪರಾಜ ಶೆಟ್ಟಿ, ಮೌಲಾನಾ ದಸ್ತಗಿರಿ ,ಶಿರೂರು ಶಕ್ತಿಕೇಂದ್ರ ಅಧ್ಯಕ್ಷರು ಹಾಗೂ ಕಾರ್ಯಕರ್ತರು ಜನಪ್ರತಿನಿಧಿಗಳು ಉಪಸ್ಥಿತರಿದ್ದರು.











