ಉಡುಪಿ (ಸೆ,21): ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಬಳಗ (ರಿ ).ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಒಕ್ಕೂಟ ನೀಡುವ ರಾಜ್ಯ ಮಟ್ಟದ “ ಶಿಕ್ಷಕ ರತ್ನ” ಪ್ರಶಸ್ತಿಗೆ ಉಡುಪಿ ಜಿಲ್ಲೆಯ ಪಿ.ಆರ್.ಎನ್.ಅಮೃತ ಭಾರತಿ ವಿದ್ಯಾಲಯ ಆಂಗ್ಲ ಮಾಧ್ಯಮ ಪ್ರೌಢಶಾಲಾ ವಿಭಾಗದ ಉಪ ಮುಖ್ಯೋಪಧ್ಯಾಯರಾದ ಶ್ರೀ ಮಹೇಶ್ ಹೈಕಾಡಿ ಆಯ್ಕೆಯಾಗಿದ್ದಾರೆ.

ಈ ಪ್ರಶಸ್ತಿಗೆ ರಾಜ್ಯದಲ್ಲಿನ ಎಲ್ಲಾ ಖಾಸಗಿ ಶಾಲೆಯ ಶಿಕ್ಷಕರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದ್ದು,ರಾಜ್ಯದ ಎಲ್ಲಾ ಜಿಲ್ಲೆ ಗಳಿಂದ ಒಟ್ಟು 35 ಶಿಕ್ಷಕರು ಆಯ್ಕೆಯಾಗಿರುತ್ತಾರೆ. ಪ್ರಶಸ್ತಿ ಪ್ರಧಾನ ಸಮಾರಂಭವು ಇದೇ ಸೆಪ್ಟೆಂಬರ್ 26 ರಂದು ಹಾಸನದ ಕಲಾಭವನದಲ್ಲಿ ನಡೆಯಲಿದೆ.

ಕರ್ನಾಟಕ ರಾಜ್ಯ ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಬಳಗ (ರಿ) (ಖಾಸಗಿ ಶಿಕ್ಷಕರ ಮತ್ತು ಉಪನ್ಯಾಸಕರ ಒಕ್ಕೂಟ) ಖಾಸಗಿ ಶಿಕ್ಷಕರ ಇತಿಹಾಸದಲ್ಲೆ ಮೊದಲ ಬಾರಿಗೆ ಆರಂಭಿಸಿದ ರಾಜ್ಯ ಮಟ್ಟದ ‘ ಶಿಕ್ಷಕ ರತ್ನ ಪ್ರಶಸ್ತಿ’ ಇದಾಗಿದೆ.










