ಬಸ್ರೂರು (ಸೆ, 29): ಡಾ। ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು, ಕುಂದಾಪುರ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದಿಂದ ಬಸ್ರೂರಿನ ಪ್ರಮುಖ ಐತಿಹಾಸಿಕ ಸ್ಥಳಗಳಾದ ತುಳುವೇಶ್ವದ ಶಿವ ದೇಗುಲ ಹಾಗೂ ಗುಪ್ಪಿ ಸದಾನಂದ ದೇಗುಲಕ್ಕೆ ಇತ್ತೀಚೆಗೆ ಭೇಟಿ ನೀಡಲಾಯಿತು.
ಕಾಲೇಜಿನ ಉಪ ಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ, ಎನ್ .ಎಸ್.ಎಸ್ ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ, ಸಹ ಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ,
ಸಾರ್ವಜನಿಕ ಸಂಪರ್ಕಾಧಿಕಾರಿ ನಾಗರಾಜ್ ಶೆಟ್ಟಿ ನೈಕಂಬ್ಳಿ , ನಿಕಟಪೂರ್ವ ಎನ್.ಎಸ್.ಎಸ್ ಯೋಜನಾಧಿಕಾರಿ ಸತೀಶ್ ಶೆಟ್ಟಿ, ಸುಕುಮಾರ ಶೆಟ್ಟಿ ಕಮಲಶಿಲೆ, ರಸಿಕ್ ಶೆಟ್ಟಿ, ಎನ್.ಎಸ್.ಎಸ್ ವಿದ್ಯಾರ್ಥಿ ನಾಯಕಿ ಸುಷ್ಮಾ ಶೆಟ್ಟಿ ,ಸ್ವಯಂಸೇವಕರು ಹಾಗೂ ಹಿರಿಯ ಎನ್.ಎಸ್ .ಎಸ್ ಸ್ವಯಂಸೇವಕರು ಉಪಸ್ಥಿತರಿದ್ದರು.
ಸ್ವರಾಜ್ಯ 75 ಕಾರ್ಯಕ್ರಮದ ಸಂಚಾಲಕ ಶ್ರೀ ಪ್ರದೀಪ್ ಕುಮಾರ್ ಬಸ್ರೂರಿನ ದೇಗುಲಗಳ ಪೌರಾಣಿಕ ಹಿನ್ನೆಲೆ ಹಾಗೂ ಐತಿಹಾಸಿಕ ಮಹತ್ವವನ್ನು ತಿಳಿಸಿದರು. ಸ್ವರಾಜ್ಯ 75 ತಂಡದ ಸದಸ್ಯರಾದ ಸಂತೋಷ ನೇರಳಕಟ್ಟೆ,ಸಂತೋಷ ಬಳ್ಕೂರು,ಭಾರ್ಗವ ಜೋಗಿ, ಸತೀಶ್ ಗುಂಡ್ಮಿ,ಭರತ್ ಗುಡಿಗಾರ್,ಪ್ರಶಾಂತ್ ಖಾರ್ವಿ, ರಾಘವೇಂದ್ರ ಬಳ್ಕೂರು ಉಪಸ್ಥಿತರಿದ್ದರು.