ಕುಂದಾಪುರ(ಅ,24): ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳ ಬೇಕು .ತಮ್ಮನ್ನು ಸಮಾಜ ಮುಖಿ ಕೆಲಸದಲ್ಲಿ ತೊಡಗಿಸಿಕೊಳ್ಳುತ್ತಾ, ದೇಶದ ಎಲ್ಲಾ ಕಾನೂನುಗಳಿಗೆ ತಾಯಿಯಂತಿರುವ ಸಂವಿಧಾನದ ಗೌರವಿಸುವುದರ ಜೊತೆಗೆ ಕಾನೂನುಗಳ ಅರಿವು ಹೊಂದಿರಬೇಕು ಎಂದು ಕುಂದಾಪುರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಗೌರವಾನ್ವಿತ ಶ್ರೀ ರವೀಂದ್ರ.ಎಂ. ಜೋಶಿ ಹೇಳಿದರು.
ಅವರು ಡಾ|ಬಿ.ಬಿ ಹೆಗ್ದೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಕುಂದಾಪುರ ತಾಲೂಕು ಕಾನೂನು ಸೇವೆಗಳ ಸಮಿತಿ ವಕೀಲರ ಸಂಘ(ರಿ). ಕುಂದಾಪುರ, ತಾಲೂಕು ಆಡಳಿತ, ತಾಲೂಕು ಪಂಚಾಯತ್ ಹಾಗೂ ಸರಕಾರದ ವಿವಿಧ ಇಲಾಖೆಗಳು ಆಶ್ರಯದಲ್ಲಿ ಹಮ್ಮಿಕೊಳ್ಳಲಾದ ಕಾನೂನು ಅರಿವು ಕಾರ್ಯಕ್ರಮನ್ನು ಉದ್ಘಾಟಿಸಿ, ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ ಇದರ ಅಧ್ಯಕ್ಷರಾದ ಗೌರವಾನ್ವಿತ ಶ್ರೀ ರಂಗೇಗೌಡ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಪ್ರಧಾನ ಸಿವಿಲ್ ಮತ್ತು ಜಿಎಂ ಎಫ್ ಸಿ ನ್ಯಾಯಾಧೀಶರು ಹಾಗೂ ತಾಲೂಕು ಕಾನೂನು ಸೇವಾ ಸಮಿತಿ ಕುಂದಾಪುರ ಇದರ ಕಾರ್ಯದರ್ಶಿಗಳಾದ ಶ್ರೀ ಧನೇಶ ಮುಗಳಿ, ಬಾರ್ ಅಸೋಸಿಯೇಷನ್(ರಿ) ಕುಂದಾಪುರ ಇದರ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಪ್ರಮೋದ ಹಂದೆ, ಕುಂದಾಪುರದ ಸಬ್ ಇನ್ಸ್ ಪೆಕ್ಟರ್ ಶ್ರೀ ಸದಾಶಿವ ಗವರೋಜಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಎನ್ ಆರ್ ಆಚಾರ್ಯ ಆಸ್ಪತ್ರೆ ಕೋಟೇಶ್ವರ ಇದರ ಮನೋವೈದ್ಯರಾದ ಡಾ ಮಹಿಮಾ ಆಚಾರ್ಯ ರವರು ಮಾದಕ ವಸ್ತುಗಳ ಸೇವನೆಯಿಂದಾಗುವ ದುಷ್ಪರಿಣಾಮಗಳು ಎನ್ನುವ ವಿಷಯ ಕುರಿತು ಉಪನ್ಯಾಸ ನೀಡಿದರು. ಕುಂದಾಪುರದ ವಕೀಲರಾದ ಶ್ರೀ ರಾಘವೇಂದ್ರ ಚರಣ ನಾವಡರವರು ಕಾನೂನು ಸೇವಾ ಪ್ರಾಧಿಕಾರದ ಧ್ಯೇಯೊದ್ದೇಶಗಳು ಹಾಗೂ ಮಾದಕ ವ್ಯಸನದ ನಿಯಂತ್ರಣದ ಕಾನೂನುಗಳ ಕುರಿತು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕಾಲೇಜಿನ ಉಪಪ್ರಾಂಶುಪಾಲರಾದ ಶ್ರೀ ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಎನ್ ಸಿ ಸಿ ಅಧಿಕಾರಿ ಶಿವರಾಜ್ ಸಿ ಅರೆಹೊಳೆ ಸ್ವಾಗತಿಸಿದರು, ಎನ್ .ಎಸ್ .ಎಸ್ ಯೋಜನಾಧಿಕಾರಿ ಪ್ರವೀಣ್ ಮೊಗವೀರ ಗಂಗೊಳ್ಳಿ ವಂದಿಸಿ, ಉಪನ್ಯಾಸಕ ಸತೀಶ ಶೆಟ್ಟಿ ಹೆಸ್ಕತ್ತೂರು ನಿರೂಪಿಸಿದರು.
ಎನ್ಎಸ್ ಎಸ್ ಘಟಕದ ಸಹಯೋಜನಾಧಿಕಾರಿ ಶ್ರೀಮತಿ ರೇಷ್ಮಾ ಶೆಟ್ಟಿ, ಯುವ ರೆಡ್ ಕ್ರಾಸ್ ಘಟಕದ ಸಂಯೋಜಕರಾದ ಯೋಗೀಶ್ ಶಾನುಭೋಗ, ಸೌಮ್ಯ ಕುಂದರ್, ರೇಂಜರ್ಸ ಘಟಕದ ಸಂಯೋಜಕರಾದ ಧನಶ್ರೀ ಕಿಣಿ ಹಾಗೂ ಕಾಲೇಜಿನ ವಿವಿಧ ಘಟಕಗಳ ವಿದ್ಯಾರ್ಥಿ ಸ್ವಯಂಸೇವಕರು ಉಪಸ್ಥಿತರಿದ್ದರು.