ಬಿದ್ಕಲ್ಕಟ್ಟೆ:ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್.ಎಸ್.ಎಸ್ ಘಟಕದ 2021-22ನೇ ಸಾಲಿನ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ ಇತ್ತೀಚಿಗೆ ಜರುಗಿತು.
ಶಂಕರನಾರಾಯಣ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಶ್ರೀ ಶ್ರೀಕಾಂತ್ ರವರು ಉದ್ಘಾಟಕರಾಗಿ ಆಗಮಿಸಿ ವಿದ್ಯಾರ್ಥಿಗಳಿಗೆ ವ್ಯಕ್ತಿತ್ವ ವಿಕಸನ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಲು ಎಸ್ ಎಸ್ ಎಸ್ ಪೂರಕವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಶುಪಾಲರಾದ ಶ್ರೀ ವಿಘ್ನೇಶ್ವರ ಭಟ್ ವಹಿಸಿದ್ದರು. ಎನ್ ಎಸ್ ಎಸ್ ಕಾರ್ಯಕ್ರಮಾಧಿಕಾರಿ,ರಾಜ್ಯಶಾಸ್ತ್ರ ಉಪನ್ಯಾಸಕ ಶ್ರೀ ರಾಘವೇಂದ್ರ ಕಿಣಿಯವರು ಪಾಸ್ತವಿಕ ಮಾತುಗಳನ್ನಾಡಿ ಎನ್ ಎಸ್ ಎಸ್ ನ ಸ್ಥಾಪನೆ, ಗುರಿ ದ್ಯೇಯೋದ್ದೇಶ, ಹಾಗೂ ವಿದ್ಯಾರ್ಥಿಗಳಿಗೆ ಎನ್.ಎಸ್.ಎಸ್ ಪ್ರಯೋಜನದ ಕುರಿತು ಮಾತನಾಡಿದರು.
ಜೀವಶಾಸ್ತ್ರ ಉಪನ್ಯಾಸಕಿ ಶ್ರೀಮತಿ ಸುಮನ ಕಿರಣ್ ಕೆ ಸ್ವಾಗತಿಸಿದರು. ರಸಾಯನಶಾಸ್ತ್ರ ಉಪನ್ಯಾಸಕ ಶ್ರೀಕಾಂತ್ ವಂದಿಸಿದರು.ಕನ್ನಡ ಉಪನ್ಯಾಸಕಿ ಶ್ರೀಮತಿ ಗುಣರತ್ನ ನಿರೂಪಿಸಿದರು.