ಹಾಲಾಡಿ(ಡಿ,22): ಜಿಲ್ಲಾ ವಿಕಲಚೇತನರ ಇಲಾಖೆ ಉಡುಪಿ ಜಿಲ್ಲೆ , ಎಪಿಡಿ ಸಂಸ್ಥೆ ಬೆಂಗಳೂರು, ಗ್ರಾಮ ಪಂಚಾಯತ್ ಹಾಲಾಡಿ ಹಾಗೂ ಗ್ರಾಮ ಪಂಚಾಯತ್ ಹಾರ್ದಳ್ಳಿ ಮಂಡಳ್ಳಿ ಆಶ್ರಯದಲ್ಲಿ ಸಮುದಾಯಾಧಾರಿತ ಔದ್ಯೋಗಿಕ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಹಾಗೂ ಪ್ರಮಾಣ ಪತ್ರ ವಿತರಣಾ, ಹೊಲಿಗೆ ಯಂತ್ರ ವಿತರಣೆ ಸಮಾರಂಭ ಕಾರ್ಯಕ್ರಮ ಡಿ. 20ರಂದು ಹಾಲಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳಾದ ಶ್ರೀಮತಿ ರತ್ನಾ ಮಾತನಾಡಿ, ವಿಶೇಷ ಚೇತನರು ತರಬೇತಿಯ ಎಲ್ಲಾ ಕೌಶಲ್ಯಗಳನ್ನು ಸದುಪಯೋಗ ಪಡೆದುಕೊಂಡು ಸ್ವಾವಲಂಬಿ ಜೀವನವನ್ನು ಯಶಸ್ವಿಯಾಗಲಿ ಎಂದು ಹಾರೈಸಿದರು.
ಸಂಸ್ಥೆಯ ನೋಡಲ್ ಅಧಿಕಾರಿಗಳಾದ ಶ್ರೀ ಹರೀಶ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಎಪಿಡಿ ಸಂಸ್ಥೆಯ ಕಾರ್ಯಕ್ರಮಗಳು ಮತ್ತು ಯೋಜನೆಗಳ ಬಗ್ಗೆ ಸ್ವವಿಸ್ತಾರವಾದ ಮಾಹಿತಿ ನೀಡಿ ಉಡುಪಿ ಜಿಲ್ಲಾ ಮಟ್ಟದ ವಿಶೇಷ ಚೇತನರ ಉದ್ಯೋಗ ಮೇಳವನ್ನು ಆಯೋಜಿಸುವ ಕುರಿತು ಪ್ರಸ್ತಾಪಿಸಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಶ್ರೀ ವಸಂತ್ ಕುಮಾರ್ ಮಾತನಾಡಿ, ವಿಶೇಷ ಚೇತನರಲಿ ಸಾಕಷ್ಟು ಪ್ರತಿಭೆಗಳಿವೆ ಅದರ ಸದ್ಬಳಕೆ ಮತ್ತು ಪ್ರಯೋಜನ ಎಪಿಡಿ ಸಂಸ್ಥೆಯ ಮೂಲಕ ಆಗಲೆಂದು ಹಾರೈಸಿದರು. ತಾಲೂಕಿನ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರಾದ ಶ್ರೀ ಮಂಜುನಾಥ ಹೆಬ್ಬಾರ್ ಮಾತನಾಡಿ ಇಲಾಖೆಯ ಎಲ್ಲಾ ಸೌಲಭ್ಯಗಳನ್ನು ಪಡೆದುಕೊಂಡು ಉತ್ತಮ ಭವಿಷ್ಯ ನಿಮ್ಮದಾಗಲಿ ಎಂದು ಶುಭ ಹಾರೈಸಿದರು.

ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸಾಧು ವಹಿಸಿದ್ದರು, ಜಿಲ್ಲಾ ವಿಕಲಚೇತನರ ಇಲಾಖೆಯ ಶಶಿಧರ ಉಪಸ್ಥಿತರಿದ್ದರು.ಈ ಕಾರ್ಯಕ್ರಮವನ್ನು ಎಪಿಡಿ ಸಂಸ್ಥೆಯ ಪ್ರತಿನಿಧಿ ಶ್ರೀ ಆಕಾಶ್ ಶೆಟ್ಟಿ ನಿರೂಪಿಸಿ, ಸ್ವಾಗತಿಸಿದರು.ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಾದ ಶ್ರೀ ದೇವರಾಜ ವಂದಿಸಿದರು.














