ಬಸ್ರೂರು (ಜ.10): ಇಲ್ಲಿನ ನಿವೇದಿತಾ ಪ್ರೌಢಶಾಲೆಯಲ್ಲಿ 5 ರಿಂದ 18 ರವರೆಗಿನ ವಿದ್ಯಾರ್ಥಿಗಳಿಗೆ ಕೋವಿಡ್ ಲಸಿಕಾಕರಣ ಅಭಿಯಾನ ಪ್ರಾಥವಿುಕ ಆರೋಗ್ಯ ಕೇಂದ್ರ ಬಸ್ರೂರು ಇವರ ಸಹಕಾರದಿಂದ ಜ.10 ರಂದು ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಸಂಚಾಲಕ ಶ್ರೀ.ಬಿ ಅಪ್ಪಣ್ಣ ಹೆಗ್ಡೆಯವರು ನೆರವೇರಿಸಿದರು.
ಸಭೆಯ ಅಧ್ಯಕ್ಷತೆಯನ್ನು ಬಸ್ರೂರು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಇಂದಿರಾ ಪೂಜಾರಿಯವರು ವಹಿಸಿದ್ದರು. ಪ್ರಾಥಮಿಕ ಆರೋಗ್ಯ ಕೇಂದ್ರ ವೈದ್ಯಾಧಿಕಾರಿಗಳಾದ ಡಾ. ವಿದ್ಯಾರವರು ಪ್ರಾಸ್ತಾವಿಕ ಮಾತುಗಳನ್ನು ಆಡಿದರು. ಶಾಲಾ ಮುಖ್ಯ ಶಿಕ್ಷಕರಾದ ಶ್ರೀ ಸುಬ್ಬಣ್ಣ ಕೋಣಿಯವರು ಅತಿಥಿಗಳನ್ನು ಸ್ವಾಗತಿಸಿದರು. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯಿತಿ ಮಾಜಿ ಉಪಾಧ್ಯಕ್ಷರಾದ ಶ್ರೀ ರಾಮಕಿಶನ್ ಹೆಗ್ಡೆ ಅವರು ಉಪಸ್ಥಿತರಿದ್ದರು.ಇನ್ನೋರ್ವ ಮುಖ್ಯ ಅತಿಥಿಗಳಾಗಿ ವೈದ್ಯಾಧಿಕಾರಿಗಳಾದ ಶ್ರೀಯುತ ಡಾ. ರಾಜೇಂದ್ರ ಶೆಟ್ಟಿ, ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ರಾದ ಶ್ರೀಮತಿ ಭಾರತಿ ಬಿ ಶೇಟ್ ನೆಲ್ಲಿಕಟ್ಟೆ, ಕೋಣಿ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಮತಿ ಸಂಧ್ಯಾ ಶೆಟ್ಟಿಯವರು ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.
ವ್ಯಾಕ್ಸಿನೇಷನ್ ನೋಡಲ್ ಅಧಿಕಾರಿಗಳಾದ ಶ್ರೀ ಪ್ರದೀಪ್ ಕುಮಾರ್ ಶೆಟ್ಟಿ ಅವರು ಉಪಸ್ಥಿತರಿದ್ದು ವಂದನಾರ್ಪಣೆಗೈದರು.ಶ್ರೀ ಉದಯ್ ಕುಮಾರ್ ಹೆಗ್ಡೆ ಅವರು ಕಾರ್ಯಕ್ರಮವನ್ನು ನಿರೂಪಿಸಿದರು.ಕಾರ್ಯಕ್ರಮದ ಯಶಸ್ವಿಗೆ ಎಲ್ಲಾ ಅಧ್ಯಾಪಕ ವೃಂದದವರು ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದವರು ಸಹಕರಿಸಿದರು.