ಕುಂದಾಪುರ(ಜ.20): ಇಲ್ಲಿನ ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿ ಆಫ್ ಕಾಮರ್ಸ್ ಎಜುಕೇಶನ್ ಸಿಎ/ಸಿಎಸ್ ಮತ್ತು ಬ್ಯಾಂಕಿಂಗ್ ತರಬೇತಿ ಸಂಸ್ಥೆ (ಸ್ಪೇಸ್) ಇದರ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿ ಆಫ್ ಇಂಡಿಯಾ ಜನವರಿ 2022 ರಲ್ಲಿ ನಡೆಸಿದ ಸಿಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆ ಬರೆದ 6 ವಿದ್ಯಾರ್ಥಿಗಳಲ್ಲಿ 5 ವಿದ್ಯಾರ್ಥಿಗಳು ತೇರ್ಗಡೆ ಹೊಂದುವುದರ ಮೂಲಕ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದಿದ್ದಾರೆ.
ಸಂಸ್ಥೆಯ ವಿದ್ಯಾರ್ಥಿಗಳಾದ ಮಿಥುನ್ ಪೂಜಾರಿ (157), ಸುಜನ್ (148), ಸಂಜನಾ (146), ಅವಿನ್ ಕೆ ಎ (142) ಮತ್ತು ಶ್ರೇಯಸ್ ಎಮ್ ಆರ್ (139) ಅಂಕಗಳೊಂದಿಗೆ ಸಿಎಸ್ ಫೌಂಡೇಶನ್ (ಸಿಎಸ್ಇಇಟಿ) ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ತೇರ್ಗಡೆ ಹೊಂದಿದ್ದಾರೆ. ಶಿಕ್ಷ ಪ್ರಭ ಅಕಾಡೆಮಿಯು ಸಿಎ/ಸಿಎಸ್ ಪರೀಕ್ಷೆಗೆ ಗುಣಮಟ್ಟದ ತರಬೇತಿಯನ್ನು ನೀಡುತ್ತಾ ಬಂದಿದ್ದು ಸಂಸ್ಥೆಯ ಅನೇಕ ವಿದ್ಯಾರ್ಥಿಗಳು ಸಿಎ/ಸಿಎಸ್ ಪರೀಕ್ಷೆಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದು ಉನ್ನತ ಹುದ್ದೆಯಲ್ಲಿದ್ದಾರೆ.
ಸಂಸ್ಥೆಯ ವಿದ್ಯಾರ್ಥಿಗಳಿಗೆ ಸಿಎ ಮತ್ತು ಸಿಎಸ್ ಪರೀಕ್ಷೆಗೆ ನಿರಂತರ ತರಗತಿ ಮತ್ತು ಹೆಚ್ಚಿನ ಪೂರಕ ಪರೀಕ್ಷೆಯನ್ನು ನಡೆಸಿ ಅವರನ್ನು ಪರೀಕ್ಷೆಗೆ ಸಿದ್ಧಗೊಳಿಸಲಾಗಿತ್ತು. ಸಾಧನೆಗೈದ ವಿದ್ಯಾರ್ಥಿಗಳು ಮಾತನಾಡಿ ನಮಗೆ ಶಿಕ್ಷ ಪ್ರಭ ಅಕಾಡೆಮಿಯು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಲು ಬೇಕಾದ ಎಲ್ಲಾ ಪೂರಕ ವ್ಯವಸ್ಥೆಯನ್ನು ಮಾಡಿ ನಮ್ಮ ಯಶಸ್ಸಿಗೆ ಬೆನ್ನೆಲುಬಾಗಿ ನಿಂತಿದೆ. ಸಂಸ್ಥೆಯ ಬೋಧಕ ಸಿಬ್ಬಂದಿಗಳ ನಿರಂತರ ಸಹಕಾರ ಮತ್ತು ನಮ್ಮ ಪ್ರಯತ್ನ ಇವತ್ತಿನ ಫಲಿತಾಂಶಕ್ಕೆ ಕಾರಣವಾಗಿದೆ ಎಂದರು.
ಸಂಸ್ಥೆಯ ಮುಖ್ಯಸ್ಥರು ಸಾಧಕ ವಿದ್ಯಾರ್ಥಿಗಳನ್ನು ಅಭಿನಂದಿಸುತ್ತ ಬೋಧಕ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಜಂಟಿಯಾಗಿ ನಡೆಸಿದ ಪ್ರಯತ್ನಕ್ಕೆ ಫಲ ಸಿಕ್ಕಿದೆ. ಸಿಎಸ್ ವಿದ್ಯಾರ್ಥಿಗಳ ಮುಂದಿನ ಹಂತದ ಪರೀಕ್ಷೆಗೂ ಅವರೊಂದಿಗೆ ಬೆನ್ನೆಲುಬಾಗಿ ಸಂಸ್ಥೆ ನಿಲ್ಲುತ್ತದೆ ಎಂದು ತಿಳಿಸಿದರು. ಸಿಎ ಮತ್ತು ಸಿಎಸ್ ಪರೀಕ್ಷೆಯ ಕುರಿತು ಹೆಚ್ಚಿನ ಮಾಹಿತಿಗಾಗಿ ಕುಂದೇಶ್ವರ ಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷ ಪ್ರಭಾ ಅಕಾಡೆಮಿಯ ಕಚೇರಿ ಅಥವಾ www.shikshaprabha.com ಗೆ ಲಾಗಿನ್ ಮಾಡಬಹುದು ಎಂದು ತಿಳಿಸಿದ್ದಾರೆ.