ಶಿರ್ವ(ಜ.23):ಇಲ್ಲಿನ ಸಂತ ಮೇರಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಪ್ರಥಮ ವರ್ಷದ ಸ್ವಯಂ ಸೇವಕರಿಗೆ ಮಾಹಿತಿ ಕಾರ್ಯಕ್ರಮವನ್ನು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡಿದ ಕಾಲೇಜಿನ ಎನ್.ಎಸ್.ಎಸ್ ಸಹ ಯೋಜನಾಧಿಕಾರಿ ಹಾಗೂ ವಾಣಿಜ್ಯಶಾಸ್ತ್ರ ಉಪನ್ಯಾಸಕರಾದ ಶ್ರೀ ಸ್ಯಾಮ್ಜೋಯಲ್ ಡಯಾಸ್ರವರು ಎನ್.ಎಸ್.ಎಸ್. ಸ್ವಯಂ ಸೇವಕರು ಸದಾ ಕಾರ್ಯ ಪ್ರವೃತ್ತವಾಗುವುದರೊಂದಿಗೆ ಸಮಾಜಕ್ಕಾಗಿ ಅರ್ಪಣಾ ಮನೋಭಾವನೆಯನ್ನು ಹೊಂದಿರಬೇಕು ಎಂದು ಹೇಳುತ್ತಾ ಎನ್,ಎಸ್.ಎಸ್ನ ಧ್ಯೇಯ, ವ್ಯಾಪ್ತಿ ಹಾಗೂ ವಿದ್ಯಾರ್ಥಿ ಜೀವನದಲ್ಲಿ ಎನ್.ಎಸ್.ಎಸ್ನ ಪಾತ್ರದ ಕುರಿತು ವಿವರಣಾತ್ಮಕ ಮಾಹಿತಿಯನ್ನು ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಡಾ. ಹೆರಾಲ್ಡ್ ಮೋನಿಸ್ರವರು ಎನ್.ಎಸ್.ಎಸ್. ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣವನ್ನು ಬೆಳೆಸುತ್ತದೆ. ಅದಕ್ಕಾಗಿ ಈ ಯೋಜನೆಯಡಿಯಲ್ಲಿ ಸಿಗುವ ಎಲ್ಲಾ ಅವಕಾಶಗಳನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್ ಘಟಕದ ಸಹಯೋಜನಾದಿಕಾರಿ ಶ್ರೀಮತಿ ದೀಪಾ ಶೆಟ್ಟಿ, ಘಟಕ ನಾಯಕರಾದ ಶ್ರೀ ಮೆಲ್ವಿನ್ ಮಥಾಯಸ್, ಕು. ಸಿಮ್ರಾನ್ ಹಾಗೂ ಹಿರಿಯ ಸ್ವಯಂ ಸೇವಕರು ಉಪಸ್ಥಿತರಿದ್ದರು.
ಪ್ರಥಮ ವರ್ಷದ ಸ್ವಯಂ ಸೇವಕರು ಕಾರ್ಯಕ್ರಮದ ಸದುಪಯೋಗಪಡಿಸಿಕೊಂದರು. ಯೋಜನಾಧಿಕಾರಿ ಶ್ರೀ ಪ್ರೇಮನಾಥ್ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಘಟಕ ನಾಯಕಿ ಕು. ಸಿಂಚನಾ ವಂದಿಸಿದರು.ಸ್ವಯಂ ಸೇವಕಿ ಕು. ವೈಷ್ಣವಿ ನಿರೂಪಿಸಿದರು.