ಶಿರ್ವ(ಫೆ.9): ಸಂತ ಮೇರಿ ಮಹಾವಿದ್ಯಾಲಯದ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಕಮಾಂಡಿಂಗ್ ಆಫೀಸರ್ ಕರ್ನಲ್ ಆರ್ ಕೆ ಸಿಂಗ್ ಅವರ ಮಾರ್ಗದರ್ಶನದಲ್ಲಿ ಒಂದು ದಿನದ ಶಸ್ತ್ರ ತರಬೇತಿ ಶಿಬಿರ ನಡೆಯಿತು.
ಕಾಲೇಜಿನ ಪ್ರಾಂಶುಪಾಲ ಡಾ.ಹೆರಾಲ್ಡ್ ಐವನ್ ಮೋನಿಸ್ ರವರು ಶಸ್ತ್ರಾಸ್ತ್ರವನ್ನು ಹೇಗೆ ನಿರ್ವಹಣೆ ಮಾಡಬಹುದೆಂದು ಪ್ರತಿಯೊಬ್ಬ ಕ್ಯಾಡೆಟ್ಗಳು ಪ್ರತ್ಯಕ್ಷವಾಗಿ ಅನುಭವ ಪಡೆದುಕೊಳ್ಳುವುದು ಅತೀ ಅಗತ್ಯ ಮುಂದೆ ವಿವಿಧ ಉದ್ಯೋಗಾವಕಾಶಗಳಿಗೆ ಇದು ಸಹಕಾರಿ ಎಂದು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕಾರ್ಕಳದ ಪೊಲೀಸ್ ಫೈರ್ ರೇಂಜ್ ಅಲ್ಲಿ ನಡೆದಂತ ಬೆಸ್ಟ್ ಫೈರಿಂಗ್ ತರಬೇತಿಯಲ್ಲಿ ಭಾಗವಹಿಸಿ ಕಾಲೇಜಿನ ಕೀರ್ತಿಯನ್ನು ಹೆಚ್ಚಿಸಿದ ಕೆಡೆಟ್ ಆಶಿಶ್ ಪ್ರಸಾದ್ ಮತ್ತು ಇತರ ಕ್ಯಾಡೆಟ್ ಗಳನ್ನು ಅಭಿನಂದಿಸಲಾಯಿತು.
ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ತರಬೇತಿನ ಮುಖ್ಯ ಉದ್ದೇಶ ಮತ್ತು ಪ್ರಯೋಜನವನ್ನು ತಿಳಿಸಿ ಪ್ರಾಸ್ತವಿಕವಾಗಿ ಮಾತನಾಡಿದರು. ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ ಉಡುಪಿ ಘಟಕದ ಹವಾಲ್ದಾರ್ ಜೆಸಿಓ ಟಿಸೆರಿಂಗ್ ಆಂಗ್ಚೋಕ್ , ಸಂತೋಷ್ ಕುಮಾರ್, ಎನ್ಸಿಓ ಗುರು ಪಾಲ್ ಸಿಂಗ್ ಭೂ-ಯುವ ಸೇನಾದಳದ ಕೆಡೆಟ್ಗಳನ್ನು ಎನ್.ಸಿ.ಸಿ. ಪರೀಕ್ಷೆಗಳಿಗೆ ಸಜ್ಜುಗೊಳಿಸುವ ಜೊತೆಗೆ ಕವಾಯತು, ಭೂಪಟ ಅಧ್ಯಯನ, ಫೈರಿಂಗ್ ಅಣಕುಯುದ್ಧ, ಶಸ್ತ್ರಗಳನ್ನು ಹೇಗೆ ನಿರ್ವಹಣೆ ಮಾಡುವುದು ಎಂಬುದನ್ನು ಪ್ರಾತ್ಯಕ್ಷಿಕೆಯಮೂಲಕ ತಿಳಿಸಿ ತರಬೇತಿ ನಡೆಸಿಕೊಟ್ಟರು.
ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಉಪನ್ಯಾಸಕಿ ಯಶೋದ, ಸೀನಿಯರ್ ಅಂಡರ್ ಆಫೀಸರ್ ವಿಶಾಲ್ ಎಸ್ ಮೂಲ್ಯ ,ಜೂನಿಯರ್ ಅಂಡರ್ ಆಫೀಸರ್ ಹರ್ಷಿತಾ, ಸುರಕ್ಷಾ ಉಪಸ್ಥಿತರಿದ್ದರು.ಕಂಪನಿ ಸರ್ಜೆಂಟ್ ಕ್ವಾರ್ಟರ್ ಮಾಸ್ಟರ್ ಮೋಹಿತ ಎನ್ ಸಾಲಿಯಾನ್,ಕಾರ್ಪೋರಲ್ ಧೀರಜ್, ಅನುಪ್ ನಾಯಕ ಮತ್ತಿತರರು ಸಹಕರಿಸಿದರು. ಕ್ಯಾಡೆಟ್ ಜನಿಸಿಯಾ ನೊರೊನ್ಹಾ ಸರ್ವರನ್ನೂ ಸ್ವಾಗತಿಸಿ , ಲ್ಲ್ಯಾನ್ಸ್ ಕಾರ್ಪೊರಲ್ ಲೋಬೋ ಆನ್ ರಿಯಾ ನೇವಿಲ್ ವಂದಿಸಿದರು. ಕ್ಯಾಡೆಟ್ ಎಲ್ರುಷಾ ಮಿಲಿನಾ ಡೇಸ ಕಾರ್ಯಕ್ರಮವನ್ನು ನಿರೂಪಿಸಿದರು.